ಮಂಗಳವಾರ, ಏಪ್ರಿಲ್ 20, 2021
26 °C

ಜಗಜೀವನ್ ರಾಂ ಪುತ್ಥಳಿ ಸ್ಥಾಪನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆಯನ್ನು ಏಪ್ರಿಲ್ 5 ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ಏಪ್ರಿಲ್ 14ರಂದು ಜಿಲ್ಲಾ ಆಡಳಿತದಿಂದ ಆಚರಿಸಲಾಗುತ್ತಿದ್ದು, ಅಂದು ವಿವಿಧ ಇಲಾಖೆಗಳಲ್ಲಿನ ಶೇ 22.75 ನಿಧಿಯ ಸೌಲಭ್ಯಗಳನ್ನು ಫಲಾನುಭವಿಗಳಿಗೆ ನೀಡಲಾಗುವುದು ಎಂದು ಪ್ರಭಾರ ಜಿಲ್ಲಾಧಿಕಾರಿ ಎ.ಎಸ್. ನಿರ್ವಾಣಪ್ಪ ಅವರು ತಿಳಿಸಿದರು.ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬಾಬು ಜಗಜೀವನ್ ರಾಂ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಇಬ್ಬರು ಮಹಾನ್ ರಾಷ್ಟ್ರ ನಾಯಕರ ಜನ್ಮ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥವತ್ತಾಗಿ ಆಚರಿಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಎರಡೂ ಜಯಂತಿಗಳ ಕಾರ್ಯಕ್ರಮವನ್ನು ಜಿಲ್ಲಾ ತರಾಸು ರಂಗಮಂದಿರದಲ್ಲಿ ಆಯೋಜಿಸಲಾಗುವುದು. ಏ.5 ಮತ್ತು 14 ರಂದು ಬೆಳಿಗ್ಗೆ 9ರಿಂದ ಜಿಲ್ಲಾಧಿಕಾರಿಗಳ ಕಚೇರಿ ಬಳಿಯಿಂದ ನಾಯಕರ ಭಾವಚಿತ್ರವುಳ್ಳ ಅಲಂಕೃತ ವಾಹನದೊಂದಿಗೆ ಮೆರವಣಿಗೆ ನಡೆಯಲಿದೆ. ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ.ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ವಿವಿಧ ಇಲಾಖೆಗಳಲ್ಲಿನ ಸೌಲಭ್ಯಗಳನ್ನು ವಿತರಿಸಲಾಗುವುದು. ಇದೇ ಸಂದರ್ಭದಲ್ಲಿ ಪಿಎಚ್.ಡಿ ಪದವಿ ಪಡೆದವರಿಗೆ ಸನ್ಮಾನಿಸಲಾಗುವುದು ಮತ್ತು ಅಂತರ್ಜಾತಿ ವಿವಾಹವಾದವರಿಗೆ ಪ್ರೋತ್ಸಾಹಧನ ನೀಡಲಾಗುವುದು ಎಂದು ತಿಳಿಸಿದರು.ಪರಿಶಿಷ್ಟ ಜಾತಿಯವರಿಗೆ ಸೌಲಭ್ಯ ಕಲ್ಪಿಸಲು ಹಾಗೂ ಜಯಂತಿಯನ್ನು ಆಚರಿಸಲು ಯಾವುದೇ ಅನುದಾನದ ಕೊರತೆ ಇಲ್ಲ. ರಾಷ್ಟ್ರ ನಾಯಕರಾದ ಬಾಬು ಜಗಜೀವನ್ ರಾಂ ಅವರ ಪುತ್ಥಳಿಯನ್ನು ನಗರದಲ್ಲಿ ಸ್ಥಾಪಿಸಬೇಕೆಂದು ಬಹುದಿನದ ಬೇಡಿಕೆಯಿದ್ದು, ಈಗಾಗಲೇ ಪ್ರಸ್ತಾವನೆ ಸಲ್ಲಿಸಲು ಲೋಕೋಪಯೋಗಿ ಇಲಾಖೆಗೆ ಆದೇಶಿಸಲಾಗಿದೆ. ಬರುವ ವರ್ಷದ ಒಳಗಾಗಿ ನಗರದಲ್ಲಿ ಪುತ್ಥಳಿಯನ್ನು ಸ್ಥಾಪಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳಲಿದೆ ಎಂದರು. ಏ.5 ಮತ್ತು 14 ರ ಜನ್ಮ ದಿನಾಚರಣೆ ಕಾರ್ಯಕ್ರಮಗಳಿಗೆ ಗ್ರಾಮಾಂತರ ಪ್ರದೇಶದಿಂದ ಬರುವ ಜನರಿಗೆ ವಾಹನದ ವ್ಯವಸ್ಥೆ ಮಾಡಲಾಗುವುದು. ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಕಡ್ಡಾಯವಾಗಿ ಬಾಬು ಜಗಜೀವನ್ ರಾಂ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಿದರು.ಜಿಲ್ಲಾ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಎಂ. ಜಯಣ್ಣ, ದಲಿತ ಸಂಘರ್ಷ ಸಮಿತಿಯ ಮಾಡನಾಯಕನಹಳ್ಳಿ ರಂಗಪ್ಪ, ಡಾ. ರಾಮಚಂದ್ರನಾಯಕ, ನಗರಸಭೆ ಮಾಜಿ ಅಧ್ಯಕ್ಷರಾದ ಡಿ.ಎನ್. ಮೈಲಾರಪ್ಪ, ನಿರಂಜನಮೂರ್ತಿ, ಮದಕರಿ ವಿದ್ಯಾಸಂಸ್ಥೆ ಸಂಸ್ಥಾಪಕ ಡಿ.ಬೋರಪ್ಪ, ಉಪವಿಭಾಗಾಧಿಕಾರಿ ಟಿ. ವೆಂಕಟೇಶ್, ಪ್ರೊಬೇಷನ್ ಉಪ ವಿಭಾಗಾಧಿಕಾರಿ ಡಾ. ಸ್ನೇಹಾ, ಪ್ರಾದೇಶಿಕ ಸಾರಿಗೆ ಅಧಿಕಾರಿ ತೆಂಬದ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಎಸ್.ಎಸ್. ಅಂಗಡಿ  ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.