ಜಗನ್ ಜಾಮೀನು ಅರ್ಜಿ ವಜಾ

7

ಜಗನ್ ಜಾಮೀನು ಅರ್ಜಿ ವಜಾ

Published:
Updated:

ಹೈದರಾಬಾದ್ (ಪಿಟಿಐ): ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಚಂಚಲಗುಡ ಕಾರಾಗೃಹದಲ್ಲಿ ಬಂಧನದಲ್ಲಿರುವ ವೈಎಸ್‌ಆರ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಡಪ ಸಂಸದ ವೈ.ಎಸ್.ಜಗಮೋಹನ್ ರೆಡ್ಡಿ ಅವರು ಜಾಮೀನು ಕೋರಿ ಸಲ್ಲಿಸಿದ್ದ ಎರಡನೇ ಅರ್ಜಿಯನ್ನೂ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯವು ಮಂಗಳವಾರ ವಜಾಗೊಳಿಸಿದೆ.ಜಾಮೀನು ಕೋರಿ ಜಗನ್ ಅವರು ಈ ಮೊದಲು ಎರಡು ಅರ್ಜಿಗಳನ್ನು ಸಲ್ಲಿಸಿದ್ದರು. ನ್ಯಾಯಾಲಯವು ನವೆಂಬರ್ 28ರಂದು ಜಗನ್ ಅವರ ಮೊದಲ ಅರ್ಜಿಯನ್ನು ವಜಾಗೊಳಿಸಿತ್ತು. ಜಗನ್ ತನಿಖೆ ಮತ್ತು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಹಿನ್ನೆಲೆಯಲ್ಲಿ ಅವರಿಗೆ ಜಾಮೀನು ನೀಡಬಾರದು ಎಂದು ಸಿಬಿಐ ಪರ ವಕೀಲರು ವಾದಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry