ಜಗಳೂರು ಅಭಿವೃದ್ಧಿ, ಕೆರೆಗಳಿಗೆ ನೀರು: ಎಸ್‌ವಿಆರ್

7

ಜಗಳೂರು ಅಭಿವೃದ್ಧಿ, ಕೆರೆಗಳಿಗೆ ನೀರು: ಎಸ್‌ವಿಆರ್

Published:
Updated:

ಜಗಳೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಸಕ್ತ ಜಿಲ್ಲಾ ಹಾಗೂ ತಾ.ಪಂ. ಚುನಾವಣೆಯಲ್ಲಿ ಬಿಜೆಪಿಗೆ ಅತ್ಯಧಿಕ  ಶೇ. 72ರಷ್ಟು ಮತಗಳು ಬಂದಿವೆ ಎಂದು ಹಟ್ಟಿ ಚಿನ್ನದ ಗಣಿ ನಿಗಮ ಅಧ್ಯಕ್ಷ ಎಸ್.ವಿ. ರಾಮಚಂದ್ರ ಹೇಳಿದರು. ಇನ್ನು ಕ್ಷೇತ್ರದ ಅಭಿವೃದ್ಧಿಗೆ ಸರ್ವ ರೀತಿಯಲ್ಲಿ ಪ್ರಯತ್ನ ನಡೆಸಲಾಗುವುದು ಎಂದು ಅವರು ಬುಧವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.‘ತಾಲ್ಲೂಕಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಳಿಸುವ ಪ್ರಮುಖ ಉದ್ದೇಶದಿಂದ ಕಾಂಗ್ರೆಸ್ ತೊರೆದು ನಾನು ಬಿಜೆಪಿಗೆ ಸೇರ್ಪಡೆಯಾದೆ. ಕೆಎಸ್‌ಆರ್‌ಟಿಸಿ ಡಿಪೊ ಸೇರಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ಮಂಜೂರು ಮಾಡಿದ್ದಾರೆ’ ಎಂದರು.ರೂ.53 ಕೋಟಿ ವೆಚ್ಚದ ಫ್ಲೋರೈಡ್‌ಪೀಡಿತ ತಾಲ್ಲೂಕಿನ 108 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಯೋಜನೆ ಹಾಗೂ 22 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರುಣಿಸುವ ಯೋಜನೆಗಳಿಗೆ ಸರ್ಕಾರ ಶೀಘ್ರ ಚಾಲನೆ ನೀಡಲಿದೆ. ಬಿಳಿಚೋಡು ಗ್ರಾಮದಲ್ಲಿ ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದೆ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಟಿ. ಗುರುಸಿದ್ದನಗೌಡ ಹೇಳಿದರು.ದೇವಿಕೆರೆ ತಾ.ಪಂ. ಕ್ಷೇತ್ರದಲ್ಲಿ ಪಕ್ಷೇತರರಾಗಿ ಜಯಗಳಿಸಿರುವ ಶ್ರೀನಿವಾಸ್ ಅವರು ಬಿಜೆಪಿಗೆ ಬರಲು ಇಚ್ಛಿಸಿದ್ದಾರೆ. ತಾ.ಪಂ.ನಲ್ಲಿ ಬಿಜೆಪಿ 7 ಸ್ಥಾನ ಪಡೆದಿದ್ದು, ಬಹುಮತಕ್ಕೆ ಒಂದು ಸ್ಥಾನದ ಅಗತ್ಯವಿತ್ತು. ಶ್ರೀನಿವಾಸ್ ಅವರ ಸೇರ್ಪಡೆಯಿಂದ ಪಕ್ಷ ಇಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಗುರುಸಿದ್ದನಗೌಡ  ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಶ್ರೀನಿವಾಸ್ ಅವರು  ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಕೆ. ಮಂಜುನಾಥ್, ಜಿ.ಪಂ. ಸದಸ್ಯ ನಾಗರಾಜ್, ಮಹೇಶ್ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry