ಶನಿವಾರ, ಏಪ್ರಿಲ್ 10, 2021
29 °C

ಜನತೆಗೆ ಕೇಂದ್ರ ಸರ್ಕಾರದ ಸಾಧನೆ ತಿಳಿಸಿ: ಶಾಸಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ಸಾಧನೆ ಹಾಗು ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನಸಾಮಾನ್ಯರಿಗೆ ತಿಳಿಸಿ ಅವರನ್ನು ಜಾಗೃತಗೊಳಿಸಬೇಕಾಗಿದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಮಾದಾಪುರ ಮತ್ತು ಹರದನಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆ, ಕೃಷಿ ವಿಕಾಸ್ ಯೋಜನೆ, ಆರೋಗ್ಯ ಅಭಿಯಾನ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಜನಸಾಮಾನ್ಯರಿಗೆ ಅನುಕೂಲವಾಗುವ ಹಲವಾರು ಯೋಜನೆಗಳನ್ನು ರೂಪಿಸಿದೆ. ಈ ಯೋಜನೆಗಳಡಿ ತಾಲ್ಲೂಕಿನಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳು ನಡೆದಿವೆ. ಈ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದರು.ಮುಂಬರುವ ಚುನಾವಣೆ ದೃಷ್ಟಿಯಿಂದ ತಾಲ್ಲೂಕಿನ ಪ್ರತಿಯೊಂದು ಜಿಲ್ಲಾ ಪಂಚಾಯಿತಿ ಕೇಂದ್ರದಲ್ಲಿ `ಕಾಂಗ್ರೆಸ್‌ಗೆ ಬನ್ನಿ ಬದಲಾವಣೆ ತನ್ನಿ~ ಎಂಬ ಕಾರ್ಯಕ್ರಮದಡಿ ಸಮಾವೇಶಗಳನ್ನು ನಡೆಸುತ್ತಿದ್ದು, ಇದೇ ತಿಂಗಳ 17 ರಂದು ಮಾದಾಪುರದಲ್ಲಿ, 20 ರಂದು ಹರದನಹಳ್ಳಿಯಲ್ಲಿ, 27 ರಂದು ಉಡಿಗಾಲದಲ್ಲಿ, 29ರಂದು ಚಾಮರಾಜನಗರ ಪಟ್ಟಣದಲ್ಲಿ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದರು.ಮಾಜಿ ಶಾಸಕ ಸಿ.ಗುರುಸ್ವಾಮಿ ಮಾತನಾಡಿದರು. ಜಿಪಂ ಅಧ್ಯಕ್ಷೆ ನಾಗಶ್ರೀ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಸವಣ್ಣ, ಬ್ಲಾಕ್ ಅಧ್ಯಕ್ಷರುಗಳಾದ ಬಿ.ಕೆ.ರವಿಕುಮಾರ್, ಸಯ್ಯದ್‌ರಫಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವಮೂರ್ತಿ, ಮೈಮುಲ್ ನಿರ್ದೇಶಕ ಎಚ್.ಎಸ್.ಬಸವರಾಜು, ಪು.ಶ್ರೀನಿವಾಸನಾಯಕ, ತಾಪಂ ಮಾಜಿ ಅಧ್ಯಕ್ಷೆ ಮಹದೇವಿ ಜಡೆಯಪ್ಪ, ಮಾಜಿ ಉಪಾಧ್ಯಕ್ಷ ಮಹಾಲಿಂಗಸ್ವಾಮಿ, ಸದಸ್ಯರಾದ ಮೀನಾಕ್ಷಿಪುಟ್ಟಸ್ವಾಮಿ ಇತರರು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.