ಶನಿವಾರ, ಮೇ 8, 2021
26 °C

ಜನಪರ ಬಜೆಟ್: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜನಪರ ಬಜೆಟ್ ನೀಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಜುಲೈನಲ್ಲಿ ಬಜೆಟ್ ಮಂಡಿಸಲು ಸಿದ್ಧತೆಗಳು ಆರಂಭವಾಗಿವೆ. ಈಗಾ ಗಲೇ ಅಧಿಕಾರಿಗಳ ಜತೆ ಸಮಾಲೋ ಚನೆ ಆರಂಭಿಸಲಾಗಿದೆ.ಜನರ ನಿರೀಕ್ಷೆಯಂತೆ ಬಜೆಟ್ ಮಂಡಿಸಲು ರೂಪುರೇಷೆಗಳನ್ನು ಸಿದ್ಧಪಡಿಸ ಲಾಗುತ್ತಿದೆ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಹೊಣೆಯನ್ನು ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯಸಿಂಗ್ ಅವರಿಗೆ ವಹಿಸಿರು ವುದು ಸ್ವಾಗತಾರ್ಹ. ದಿಗ್ವಿಜಯ್‌ಸಿಂಗ್ ಅವರ ಮಾರ್ಗದರ್ಶನದಲ್ಲಿ ಪಕ್ಷ ರಾಜ್ಯದಲ್ಲಿ ಮತ್ತಷ್ಟು ಸದೃಢ ವಾಗಲಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಸಮರ್ಥನೆ:  ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಿಸಿರುವುದನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ, ಇದೊಂದು ಅಗತ್ಯ ಮತ್ತು ಅನಿವಾರ್ಯವಾಗಿತ್ತು ಎಂದರು.ಸಾರಿಗೆ ಸಂಸ್ಥೆಗಳು ನಷ್ಟ ಅನುಭವಿಸುತ್ತಿವೆ. ಈ ನಷ್ಟವನ್ನು ಭರ್ತಿ ಮಾಡಿಕೊಳ್ಳಲು ಪ್ರಯಾಣಿಕರಿಗೆ ಹೊರೆಯಾಗದಂತೆ ದರ ಹೆಚ್ಚಿಸಲಾಗಿದೆ ಎಂದು ನುಡಿದರು.ದಿನವಿಡೀ ಸಭೆ: ಬಜೆಟ್ ತಯಾರಿ ಸಂಬಂಧ ಮುಖ್ಯಮಂತ್ರಿಯವರು ಸೋಮವಾರ ಇಡೀ ದಿನ ವಿವಿಧ ಇಲಾಖೆಗಳ ಮುಖ್ಯಸ್ಥರ ಜೊತೆ ಚರ್ಚೆ ನಡೆಸಿದರು. ಮುಖ್ಯಮಂತ್ರಿಯವರ ಗೃಹಕಚೇರಿ `ಕೃಷ್ಣಾ'ದಲ್ಲಿ ಬೆಳಿಗ್ಗೆ ಆರಂಭವಾದ ಸಭೆ ರಾತ್ರಿಯವರೆಗೂ ನಡೆಯಿತು.

ವಿವಿಧ ಇಲಾಖೆಗಳಲ್ಲಿ ಇರುವ ಯೋಜನೆಗಳು, ಹೊಸದಾಗಿ ರೂಪಿಸಬಹುದಾದ ಯೋಜನೆಗಳು, ಕೇಂದ್ರ ಸರ್ಕಾರದಿಂದ ವಿವಿಧ ಇಲಾಖೆಗಳಿಗೆ ದೊರೆಯುತ್ತಿರುವ ಅನುದಾನ ಮತ್ತಿತರ ವಿವರಗಳ ಕುರಿತು ಸಿದ್ದರಾಮಯ್ಯ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆದರು.ಶುಕ್ರವಾರದವರೆಗೂ ಮುಖ್ಯಮಂತ್ರಿ ಯವರು ಬಜೆಟ್ ಪೂರ್ವ ಸಭೆಗಳನ್ನು ನಡೆಸುವರು. ಪ್ರತಿದಿನವೂ ಎಂಟಕ್ಕೂ ಹೆಚ್ಚು ಇಲಾಖೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಲು ವೇಳಾಪಟ್ಟಿಯನ್ನು ರೂಪಿಸಿಕೊಂಡಿದ್ದಾರೆ. ಈ ಸಭೆಗಳು ಪೂರ್ಣಗೊಂಡ ಬಳಿಕ ಬಜೆಟ್‌ಗೆ ಸ್ಪಷ್ಟರೂಪ ನೀಡುವ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ ಎಂದು ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.