ಶುಕ್ರವಾರ, ಏಪ್ರಿಲ್ 23, 2021
31 °C

ಜನರಲ್ಲಿ ಅರಿವು ಮೂಡಿಸಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಪಟ್ಟಣ: ಗ್ರಾಮಗಳ ಸಮಗ್ರ ಅಭಿವೃದ್ಧಿಯನ್ನೇ ಧ್ಯೇಯವಾಕ್ಯವನ್ನಾಗಿಸಿಕೊಂಡು ಎನ್‌ಎಸ್‌ಎಸ್ ಶಿಬಿರಾರ್ಥಿಗಳು ಮೂಲಭೂತ ಸಮಸ್ಯೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಅದನ್ನು ಬಗೆಹರಿಸಿದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಗ್ರಾಮರಾಜ್ಯದ ಕನಸು ನನಸಾಗಲಿದೆ ಎಂದು ಸು.ತ. ರಾಮೇಗೌಡ ಅಭಿಪ್ರಾಯಪಟ್ಟರು.ತಾಲ್ಲೂಕಿನ ಕೋಲೂರು ಗ್ರಾಮದಲ್ಲಿ ವಿದ್ಯಾನಿಕೇತನ ಮಹಿಳಾ ಪ್ರಥಮ ದರ್ಜೆ ಕಾಲೇಜು ಏರ್ಪಡಿಸಿದ್ದ ವಿಶೇಷ ಎನ್‌ಎಸ್‌ಎಸ್ ಶಿಬಿರದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು.ಶಿಬಿರಾರ್ಥಿಗಳು ರಸ್ತೆಗಳ ಅಭಿವೃದ್ಧಿ, ಚರಂಡಿ ದುರಸ್ತಿ, ಜನ-ಜಾನುವಾರು ಆರೋಗ್ಯ ತಪಾಸಣೆ ಮುಂತಾದ ಸಮಾಜ ಕಾರ್ಯಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮ, ಕಾನೂನು ಅರಿವು ಶಿಬಿರ ಏರ್ಪಡಿಸಿದ್ದು ಅರ್ಥಪೂರ್ಣವಾಗಿದೆ. ಅದರೆ ತಿಂಗಳಿಗೆಒಮ್ಮೆಯಾದರೂ ಗ್ರಾಮಕ್ಕೆ ಭೇಟಿ ನೀಡಿ ತಾವು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿದಲ್ಲಿ ಶಿಬಿರ ಸಾರ್ಥಕವಾಗುತ್ತದೆ ಎಂದು ಅವರು ತಿಳಿಸಿದರು.ಅಧ್ಯಕ್ಷತೆ ವಹಿಸಿದ್ದ ಜನತಾ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ. ಪುಟ್ಟಸ್ವಾಮಿಗೌಡ ಮಾತನಾಡಿ,  ಎನ್‌ಎಸ್‌ಎಸ್ ಶಿಬಿರಗಳು ವಿದ್ಯಾರ್ಥಿಗಳ ಪಾಲಿಗೆ ಸಾಮಾಜಿಕ, ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸುವುದಕ್ಕೆ ಪ್ರಯೋಗ ಶಾಲೆಯಾಗಿದ್ದು, ಶಿಬಿರದಲ್ಲಿ ಕಲಿತಿದ್ದನ್ನು ಸಮಾಜದ ಒಳಿತಿಗೆ ವಿನಿಯೋಗಿಸಬೇಕಿದೆ ಎಂದು ಹೇಳಿದರು.

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಕೋಲೂರು ಪ್ರಭು, ಲೋಕಶಿಕ್ಷಣ ಇಲಾಖೆ ಸಹಾಯಕ ನಿರ್ದೇಶಕ ಮರಿಸ್ವಾಮಿಗೌಡ ಮಾತನಾಡಿದರು.ಡಾ.ಮಲ್ಲೇಶ್ ದ್ಯಾವಾಪಟ್ಣ, ಅನಂತಕೃಷ್ಣ ರಾಜೇ ಅರಸು, ಕೆ.ವಿ. ಶ್ರೀನಿವಾಸ್, ಪ್ರಾಂಶುಪಾಲ ಟಿ.ಎಂ. ರಾಜು ಉಪಸ್ಥಿತರಿದ್ದರು. ಮೈಸೂರಿನ ಪರಿವರ್ತನಾ ತಂಡದವರು ಕಂಸಾಳೆ ನೃತ್ಯ, ಮಂಗಳವಾರಪೇಟೆ ಪ್ರಕಾಶ್, ಆನಂದ್ ತಂಡದವರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.