ಬುಧವಾರ, ಏಪ್ರಿಲ್ 21, 2021
33 °C

ಜನರಿಗೋಸ್ಕರ ಜನರೊಂದಿಗೆ ಕೆಲಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: `ಭಾರತೀಯ ನಾಗರಿಕ ಸೇವೆ (ಐಎಎಸ್) ಉತ್ತೀರ್ಣರಾದ ನಂತರ ಮೊಟ್ಟಮೊದಲು ಹೈದರಾಬಾದ್ ಕರ್ನಾಟಕ ವಿಭಾಗದಿಂದಲೇ ಬೀದರ್ ಸಹಾಯಕ ಆಯುಕ್ತೆ (ಎಸಿ) ಆಗಿ ಸೇವೆ ಆರಂಭಿಸಿದ್ದೇನೆ. ಮೊದಲಿನಿಂದಲೂ ಜನರಿಗೋಸ್ಕರ ಜನರೊಂದಿಗೆ ಸೇರಿಕೊಂಡು ಕೆಲಸ ಮಾಡುವುದು ನನ್ನ ಅಭ್ಯಾಸ~ ಎಂದು ಗುಲ್ಬರ್ಗ ವಿಭಾಗದ ನೂತನ ಪ್ರಾದೇಶಿಕ ಆಯುಕ್ತರಾಗಿ ಶನಿವಾರ ಅಧಿಕಾರ ಸ್ವೀಕರಿಸಿದ ಕೆ.ರತ್ನಪ್ರಭಾ ಹೇಳಿದರು.ಗುಲ್ಬರ್ಗದಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಪತ್ರಕರ್ತರ ಜೊತೆ ಮಾತನಾಡಿದ ಅವರು ಜನರ ಕುಂದುಕೊರತೆಗಳ ಕಡೆಗೆ ಗಮನ ಕೊಡುವುದು ಮೊದಲ ಆದ್ಯತೆ. ಸಹಾಯಕ ಕಮಿಷನರ್, ಜಿಲ್ಲಾಧಿಕಾರಿಯಾಗಿದ್ದಾಗ ಜನರೊಂದಿಗೆ ನೇರವಾಗಿ ವ್ಯವಹರಿಸುವ ಸಂದರ್ಭ ಇರುತ್ತಿತ್ತು. ನಾಗರಿಕ ಸೇವಾ ಕ್ಷೇತ್ರದಲ್ಲಿ 28 ವರ್ಷಗಳ ಅನುಭವ ಇರುವುದರಿಂದ ಸಹಜವಾಗಿ ಆಡಳಿತ ಕ್ಷೇತ್ರವ್ಯಾಪ್ತಿ ಹೆಚ್ಚಾಗಿದೆ. ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು, ಇತರ  ಅಧಿಕಾರಿಗಳಿಂದ ಕೆಲಸ ಮಾಡಿಸಬೇಕಾಗುತ್ತದೆ ಎಂದರು.`ಆಂಧ್ರಪ್ರದೇಶದ ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಹೆಚ್ಚಿನ ಅನುಭವ ಪಡೆದುಕೊಂಡಿದ್ದೇನೆ. ಹೈದರಾಬಾದ್ ಕರ್ನಾಟಕ ವಿಭಾಗದಲ್ಲಿರುವ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದೊಡ್ಡ ಐ.ಟಿ. ಕಂಪೆನಿಗಳಲ್ಲಿ ಕೆಲಸ ದೊರಕಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಬೇಕೆನ್ನುವುದು ನನ್ನ ಆಶಯ~ ಎಂದು ನುಡಿದರು.ಜನರು ಭೀತಿಯಿಲ್ಲದೆ ಸಮಸ್ಯೆಗಳನ್ನು ಹೇಳಿಕೊಳ್ಳುವಂತಾಗಬೇಕು. ಯಾವುದೇ ಯೋಜನೆಗಳು ಅನುಷ್ಠಾನಗೊಳ್ಳಲು ಜನರ ಸಹಕಾರ ತುಂಬಾ ಮುಖ್ಯ ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.