ಸೋಮವಾರ, ಮೇ 10, 2021
26 °C

ಜನರ ಕಷ್ಟಕ್ಕೆ ಸ್ಪಂದಿಸಿ- ಅಧಿಕಾರಿಗಳಿಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಹೇಳಿದರು.ಅವರು ಬುಧವಾರ ತಾಲ್ಲೂಕಿನ ವದಗನಾಳ ಗ್ರಾಮದಲ್ಲಿ ಗೋಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು.ಗ್ರಾಮದಲ್ಲಿರುವ ಕೆರೆಯೂ ಸೇರಿದಂತೆ ಜಿಲ್ಲೆಯಲ್ಲಿನ ಕೆರೆಗಳು ಬತ್ತಿ ಹೋಗಿವೆ. ಈ ಕೆರೆಗಳಲ್ಲಿನ ಹೂಳು ಎತ್ತಲು ಇದು ಸಕಾಲ. ಇದರಿಂದ ಕೆರೆಯಲ್ಲಿ ನೀರು ನಿಲ್ಲುವ ಜೊತೆಗೆ ಅಂತರ್ಜಲ ಮಟ್ಟವೂ ಹೆಚ್ಚಾಗಲಿದೆ. ಈ ಕುರಿತಂತೆ ಗಮನ ಹರಿಸಬೇಕು ಎಂದು ಅಭಿಪ್ರಾಯಪಟ್ಟರು.ಗ್ರಾಮದಲ್ಲಿನ ಗೋಶಾಲೆಯಲ್ಲಿನ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಬರ ಪರಿಹಾರ ಕಾಮಗಾರಿ ಬಗ್ಗೆ ಟೀಕೆ ಮಾಡುತ್ತಿರುವ ವಿರೋಧ ಪಕ್ಷಗಳ ನಾಯಕರು ವದಗನಾಳ ಗ್ರಾಮಕ್ಕೆ ಭೇಟಿ ನೀಡಬೇಕು ಎಂದು ಕಿವಿಮಾತು ಹೇಳಿದರು.ಇದಕ್ಕೂ ಮುನ್ನ ಗ್ರಾಮದ ಮಹಿಳೆಯರಿಬ್ಬರು ಯಾವುದಾದರೂ ವಸತಿ ಯೋಜನೆಯಡಿ ಮನೆ ಒದಗಿಸುವಂತೆ ಮನವಿ ಮಾಡಿದರು.ಗ್ರಾಮದಲ್ಲಿ ಪಂಪ್‌ಸೆಟ್‌ಗಳ ಸಂಖ್ಯೆ ಹೆಚ್ಚಾಗಿವೆ. ಇವುಗಳ ಸಂಖ್ಯೆಗೆ ತಕ್ಕಂತೆ ಟ್ರಾನ್ಸ್‌ಫಾರ್ಮರ್ ಅಳವಡಿಸಬೇಕು ಎಂದೂ ಗ್ರಾಮಸ್ಥರು ಮನವಿ ಮಾಡಿದರು. ಈ ಎಲ್ಲ ವಿಷಯಗಳ ಬಗ್ಗೆ ಶಾಸಕ ಸಂಗಣ್ಣ ಕರಡಿ ಕ್ರಮ ಕೈಗೊಳ್ಳುವರು ಎಂದು ಭರವಸೆ ನೀಡಿದರು.ಸಂಸದ ಶಿವರಾಮಗೌಡ, ಶಾಸಕರಾದ ಪರಣ್ಣ ಮುನವಳ್ಳಿ, ಶ್ರೀಶೈಲಪ್ಪ ಬಿದರೂರ, ಮಾಜಿ ಸಚಿವ ಸಿ.ಸಿ.ಪಾಟೀಲ, ವಿಧಾನಪರಿಷತ್ ಸದಸ್ಯ ಹಾಲಪ್ಪ ಆಚಾರ್, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಮುಖಂಡರಾದ ಅಮರೇಶ ಕರಡಿ, ಭೂನ್ಯಾಯ ಮಂಡಳಿ ಸದಸ್ಯ ಹಾಲೇಶ ಕಂದಾರಿ ಮತ್ತಿತರರು         ಉಪಸ್ಥಿತರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.