ಸೋಮವಾರ, ಏಪ್ರಿಲ್ 12, 2021
23 °C

ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜರಾಜೇಶ್ವರಿ ನಗರ:  ಜನರ ನಿರೀಕ್ಷೆಗೆ ತಕ್ಕಂತೆ ಬೆಂಗಳೂರು ನಗರವನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದಕ್ಕಾಗಿ ಹಲವು ಶಾಶ್ವತ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಸದಸ್ಯೆ ರಾಜೇಶ್ವರಿ ಬೆಳಗೋಡ್ ಹೇಳಿದರು. ನಾಯಂಡನಹಳ್ಳಿ ವಾರ್ಡ್‌ನ ವಿನಾಯಕ ನಗರದಲ್ಲಿ ಹಮ್ಮಿಕೊಂಡಿದ್ದ ಕೆಂಪೇಗೌಡರ ಜಯಂತ್ಯುತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಕೆಂಪೇಗೌಡ ನಿರ್ಮಿತ ಬೆಂಗಳೂರು ನಗರವನ್ನು ಇನ್ನಷ್ಟು ಸುಂದರಗೊಳಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.ಒಕ್ಕಲಿಗರ ಸಂಘದ ಉಪಾಧ್ಯಕ್ಷ ಪ್ರೊ.ಕೆ.ಮಲ್ಲಯ್ಯ ಮಾತನಾಡಿ, ಕೆಂಪೇಗೌಡರ ನಿರೀಕ್ಷೆಗೂ ಮೀರಿ  ನಗರ ಬೆಳೆಯುತ್ತಿದೆ ಎಂದರು.ಬಿಜೆಪಿ ಮುಖಂಡರಾದ ಅರುಣ್ ಸೋಮಣ್ಣ, ಉಮೇಶ್ ಬೆಳಗೊಡು, ಬಿಬಿಎಂಪಿ ಸದಸ್ಯ ಉಮೇಶ್ ಶೆಟ್ಟಿ, ಕಾರ್ಯಪಾಲಕ ಎಂಜಿನಿಯರ್ ಗುರುನಾಥ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಸವರಾಜು, ಕಂದಾಯ ಅಧಿಕಾರಿ ರಾಮೇಗೌಡ, ನಾಯಂಡನಹಳ್ಳಿ ವಾರ್ಡ್ ಅಧ್ಯಕ್ಷ ರಾಜಣ್ಣ ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.