ಶುಕ್ರವಾರ, ಮೇ 14, 2021
31 °C

ಜನರ ಸಮಸ್ಯೆಗೆ ಸ್ಪಂದಿಸಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊನ್ನಾಳಿ: ಸಮರ್ಥ ಮುಖಂಡನಾಗಬೇಕಾದರೆ ಮೊದಲು ಜನರೊಂದಿಗೆ ಒಡನಾಟ ಬೆಳೆಸಿಕೊಳ್ಳಬೇಕು. ಉತ್ತಮ ಬಾಂಧವ್ಯ ಇಟ್ಟುಕೊಳ್ಳಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸಚಿವ ಎಸ್.ಎ. ರವೀಂದ್ರನಾಥ್ ಹೇಳಿದರು.ಇಲ್ಲಿನ ಹಿರೇಕಲ್ಮಠದ ಪಂಚಾಚಾರ್ಯ ಸಮುದಾಯ ಭವನದಲ್ಲಿ ಶುಕ್ರವಾರ ನಡೆದ ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಹಾಗೂ ಯುವ ಮೋರ್ಚಾದ ಪರಿಚಯ ವರ್ಗವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪಕ್ಷ, ವೈಯಕ್ತಿಕ ಅಭಿವೃದ್ಧಿಯೊಂದಿಗೆ ಕಾರ್ಯಕರ್ತರು ಸಮಾಜ ಕಟ್ಟುವಂತಹ ಮಹತ್ವದ ಕೆಲಸವನ್ನೂ ಮಾಡಬೇಕು ಎಂದು ಅವರು ತಿಳಿಸಿದರು.ರಾಜ್ಯ ಎಸ್‌ಸಿ ಮೋರ್ಚಾ ಅಧ್ಯಕ್ಷ ಎ.ಆರ್. ಕೃಷ್ಣಮೂರ್ತಿ ಮಾತನಾಡಿ, ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲೂ ಭ್ರಷ್ಟಾಚಾರ ವ್ಯಾಪಕವಾಗಿದೆ. ಅದರ ನಿಯಂತ್ರಣಕ್ಕೆ ಎಲ್ಲರೂ ಶ್ರಮಿಸಬೇಕಿದೆ ಎಂದು ತಿಳಿಸಿದರು.ರಾಜ್ಯ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಮೌರ್ಯ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎ.ಬಿ. ಹನುಮಂತಪ್ಪ, ಮಾಜಿ ಶಾಸಕ ಗಂಗಹನುಮಯ್ಯ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಶಾಂತರಾಜ್ ಪಾಟೀಲ್, ಶಿವಶಂಕರ್ ಇತರರು ಉಪಸ್ಥಿತರಿದ್ದರು.ಪ್ರಾಂತ ಪ್ರಶಿಕ್ಷಣ ಪ್ರಕೋಷ್ಟದ ಸಂಚಾಲಕ ಗಿರೀಶ್ ಪಟೇಲ್ ಪ್ರಾಸ್ತಾವಿಕ ಮಾತನಾಡಿದರು.

ಗಂಗರಾಜು ಸ್ವಾಗತಿಸಿದರು. ರಾಯಸಂದ್ರ ರವಿಕುಮಾರ್ ಕಾರ್ಯಕ್ರಮ ನಿರೂಪಿಸಿದರು. ರಂಗಸ್ವಾಮಿ ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.