ಜನವರಿಯಲ್ಲಿ 80ನೇ ಕನ್ನಡ ಸಾಹಿತ್ಯ ಸಮ್ಮೇಳನ

7

ಜನವರಿಯಲ್ಲಿ 80ನೇ ಕನ್ನಡ ಸಾಹಿತ್ಯ ಸಮ್ಮೇಳನ

Published:
Updated:

ಮಡಿಕೇರಿ: ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2014ರ ಜನವರಿ 7, 8 ಮತ್ತು 9ರಂದು ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಮೈದಾನದಲ್ಲಿ ಹಮ್ಮಿ­ಕೊಳ್ಳಲು ತೀರ್ಮಾನಿಸಲಾಗಿದೆ.ನಗರದ ಕೋಟೆ ವಿಧಾನ ಸಭಾಂಗಣ­ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸ್ವಾಗತ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಈಗಾಗಲೇ ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಜೆಟ್‌ನಲ್ಲಿ ಒಂದು ಕೋಟಿ ರೂಪಾಯಿ ಪ್ರಕಟಿಸ­ಲಾಗಿದ್ದು, ಹೆಚ್ಚುವರಿ­ಯಾಗಿ ಎರಡು ಕೋಟಿ ರೂಪಾಯಿ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿಕೊಳ್ಳ­ಲಾಗುವುದು ಎಂದು ಸಚಿವರು ತಿಳಿಸಿದರು.  ಸಾಹಿತ್ಯ ಸಮ್ಮೇಳನ  ಯಶಸ್ವಿಗೊಳಿಸಲು ಎಲ್ಲರೂ ಶ್ರಮಿಸಬೇಕು. ಇದಕ್ಕೆ ಜಿಲ್ಲೆಯ ಜನರ ಸಹಕಾರ ಅಗತ್ಯ. ಸಾಹಿತ್ಯ ಸಮ್ಮೇಳನವನ್ನು ಎಲ್ಲರೂ ಸೇರಿ ಆಚರಣೆ ಮಾಡಬೇಕಿದೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry