ಗುರುವಾರ , ಜನವರಿ 23, 2020
20 °C
ಬಿಜೆಪಿಗೆ ಯಡಿಯೂರಪ್ಪ ಸೇರ್ಪಡೆ ವಿಚಾರ

ಜನವರಿ 14ರ ಬಳಿಕ ನಿರ್ಧಾರ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ತೊರೆದಿರುವ ಎಲ್ಲ ನಾಯಕರನ್ನು ಮರಳಿ ಪಕ್ಷಕ್ಕೆ ಕರೆತರಲು ಹಿರಿಯ ಬಿಜೆಪಿ ನಾಯಕರು ಒಲವು ತೋರಿದ್ದಾರೆ. ದೆಹಲಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಮುಖ್ಯ­ಮಂತ್ರಿಗಳ ಸಭೆಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಗುಜರಾತ್‌ ಮಾಜಿ ಮುಖ್ಯ­ಮಂತ್ರಿ ಕೇಶುಭಾಯ್‌ ಪಟೇಲ್‌ ಅವರೂ ಸೇರಿದಂತೆ ಪಕ್ಷ ಬಿಟ್ಟಿರುವ ಎಲ್ಲ ನಾಯಕರನ್ನು ಮರಳಿ ಕರೆತರುವ ಕುರಿತು ಚರ್ಚಿಸಲಾಯಿತು.ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಪಕ್ಷ ಬಲಪಡಿಸುವ ಉದ್ದೇಶದಿಂದ ಹೊರ­ಗಡೆ ಹೋಗಿರುವ ನಾಯಕರನ್ನು ಒಗ್ಗೂಡಿಸುವ ಅಗತ್ಯವಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಯಿತು. ಆದರೆ, ಅಂತಿಮ ತೀರ್ಮಾನ ಕೈಗೊಳ್ಳಲಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ. ಯಡಿಯೂರಪ್ಪ ಅವರನ್ನು ಮರಳಿ ಕರೆತರುವ ಕುರಿತು ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮೂಲಗಳು ವಿವರಿಸಿವೆ.ಯಡಿಯೂರಪ್ಪನವರ ಮರು ಸೇರ್ಪಡೆ ಬಹುತೇಕ ಖಚಿತವಾಗಿದ್ದು, ಜನವರಿ 14ರ ಬಳಿಕ ನಿರ್ಧಾರ ಪ್ರಕಟಿಸ­ಲಾಗುವುದು ಎಂದು ಬಿಜೆಪಿ ವಕ್ತಾರ ಪ್ರಕಾಶ್‌ ಜಾವಡೇಕರ್‌ ಅವರು ಸಂಜೆ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

ಪ್ರತಿಕ್ರಿಯಿಸಿ (+)