ಶನಿವಾರ, ಮೇ 15, 2021
24 °C

ಜನವಿರೋಧಿ ನೀತಿಗೆ ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಭಾನುವಾರ ನಗರಕ್ಕೆ ಆಗಮಿಸಿದ್ದ  ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರ ಕಾರಿಗೆ ಪ್ರವಾಸಿ ಮಂದಿರದ ಬಳಿ ಅಡ್ಡ ಹಾಕಲು ಯತ್ನಿಸಿದ ಜಿಲ್ಲಾ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದರು.ಜಿಲ್ಲೆಯಲ್ಲಿ ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮಗಳಿಗೆ ಕೇಂದ್ರ ಸಚಿವರನ್ನು ಆಹ್ವಾನಿಸಲಿಲ್ಲ. ಹಾಗೆಯೇ, ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ರಾಜ್ಯ ಸರ್ಕಾರ ಹೈಜಾಕ್ ಮಾಡುವ ಮೂಲಕ ಕೀಳುದರ್ಜೆಯ ರಾಜಕಾರಣ ಮಾಡುತ್ತಿದೆ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.ಜಿಲ್ಲೆಯ ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ; ಕೊಳೆಗೇರಿ ಪ್ರದೇಶಗಳ ಜನರಿಗೆ ಹಕ್ಕುಪತ್ರ ವಿತರಿಸುತ್ತಿಲ್ಲ. ಪಾರಂಪರಿಕ ಅರಣ್ಯವಾಸಿಗಳ ಹಕ್ಕು ಮಾನ್ಯತಾ ಕಾಯ್ದೆಯಡಿ ಅರಣ್ಯವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಮುಖಂಡರು ದೂರಿದರು.ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಬಿ.ಎ. ರಮೇಶ್ ಹೆಗ್ಡೆ, ರುದ್ರೇಶ್, ದೇವೇಂದ್ರಪ್ಪ,ರವಿಕುಮಾರ್ ಮತ್ತಿತರ ಮುಖಂಡರು ವಹಿಸಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.