ಮಂಗಳವಾರ, ಮೇ 17, 2022
23 °C

ಜನಸಂಖ್ಯೆ ಆಧಾರದಲ್ಲಿ ಮೀಸಲಿಗೆ ಆಗ್ರಹಿಸಿ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಪರಿಶಿಷ್ಟ ಜಾತಿಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿತು.



ಬರುವ ಅಧಿವೇಶನದಲ್ಲಿ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸುವ ಮೂಲಕ ರಾಜಕೀಯ ಪ್ರಾತಿನಿಧ್ಯ ಹಾಗೂ ಸರ್ಕಾರಿ ಸೌಲಭ್ಯಗಳಿಂದ ವಂಚಿತವಾಗಿರುವ ಸಮಾಜಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.



ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು. ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಕಳೆದ ಒಂದೂವರೆ ದಶಕದಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನುಕಾಯಂಗೊಳಿಸಬೇಕು. ಪರಿಶಿಷ್ಟ ಜಾತಿ ಜನರ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಬೇಕು. ವಿಶೇಷ ಘಟಕ ಯೋಜನೆ ಹಾಗೂ ಶೇ 18 ರಷ್ಟು ಅನುದಾನವನ್ನು ಸಮರ್ಪಕವಾಗಿ ಬಳಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.



ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜು ಕಡ್ಯಾಳ್, ಪ್ರಧಾನ ಕಾರ್ಯದರ್ಶಿ ಪ್ರಭುರಾವ್ ತಾಳಮಡಗಿ, ಪ್ರಮುಖರಾದ ಅಶೋಕರಾವ್ ಕಟ್ಟೆ, ಶಾಮರಾವ್, ಶಶಿಕಾಂತ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.