ಚಿತ್ರದುರ್ಗ: ಕಾನೂನುಗಳಲ್ಲಿ ಸಾಕಷ್ಟು ಸುಧಾರಣೆಗಳಾಗಿದ್ದು, ಭೋವಿ ಸಮುದಾಯದವರು ಪರವಾನಗಿ ಇಲ್ಲದೆ ಕಲ್ಲು ಒಡೆಯವುದಾಗಲಿ ಅಥವಾ ಇತರ ಅನಧಿಕೃತ ಕಾರ್ಯ ಕೈಗೊಳ್ಳಬಾರದು. ಸಮುದಾಯದ ಜನಸಾಮಾನ್ಯರ ಕಷ್ಟಸುಖಗಳಿಗೆ ಸ್ಪಂದಿಸುವ ಕಾರ್ಯ ಮಾಡಬೇಕು ಎಂದು ಸಣ್ಣ ನೀರಾವರಿ ಸಚಿವ ಶಿವರಾಜ್ ತಂಗಡಗಿ ಸಲಹೆ ನೀಡಿದರು.

ನಗರದ ಭೋವಿ ಗುರುಪೀಠದ ಆವರಣದಲ್ಲಿ ಭಾನುವಾರ ನಡೆದ ಭೋವಿ ಸಮುದಾಯದ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶೀಘ್ರದಲ್ಲೇ ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಭೋವಿ ಸಮಾವೇಶ ಆಯೋಜಿಸಿ, ಸಮುದಾಯದ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಿದರು.

ಈಗ ಸಮುದಾಯದ ಸಂಘಟನೆ ಬಲಿಷ್ಠವಾಗುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಸಭೆ, ಸಮಾರಂಭಗಳಲ್ಲಿ ಸೇರುತ್ತಿದ್ದಾರೆ. ರಾಜ್ಯದ ಆರು ಲೋಕಸಭಾ ಕ್ಷೇತ್ರಗಳಲ್ಲಿ ಭೋವಿ ಸಮುದಾಯದವರು ನಿರ್ಣಾಯಕ ಪಾತ್ರವಹಿಸುತ್ತಿದ್ದಾರೆ ಎಂದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಂಜುನಾಥ್ ಪ್ರಸಾದ್ ಮಾತನಾಡಿ, ಸರ್ಕಾರದ ಸೌಲಭ್ಯಗಳನ್ನು ಬಳಸಿ ಕೊಂಡು ಸರ್ಕಾರಿ ಹುದ್ದೆಗಳಲ್ಲಿ ನಾವು ಉತ್ತಮ ಜೀವನ ನಡೆಸುತ್ತಿದ್ದೇವೆ. ಆದರೆ, ಗ್ರಾಮಾಂತರ ಪ್ರದೇಶದಲ್ಲಿನ ನಮ್ಮ ಜನ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸದೇ ನಮ್ಮ ಸಮಸ್ಯೆಗಳ ಬಗ್ಗೆಯೇ ಚರ್ಚಿಸುತ್ತಿರುವುದು ವಿಪರ್ಯಾಸ ಎಂದು ವಿಷಾದಿಸಿದರು.

ಕಷ್ಟದಲ್ಲಿರುವವರಿಗೆ ಸರ್ಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ಇಲ್ಲ. ಆದ್ದರಿಂದ ಸರ್ಕಾರಿ ನೌಕರರು ಸಮುದಾಯದ ಕಟ್ಟಕಡೆಯ ವ್ಯಕ್ತಿಗೆ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ ಜಾಗೃತರನ್ನಾಗಿಸಬೇಕಿದೆ ಎಂದು ಹೇಳಿದರು.

ಹಳ್ಳಿಗಳಲ್ಲಿ ಕುಡಿಯುವ ನೀರು, ಶಾಲೆ ಸೇರಿದಂತೆ ಇನ್ನಿತರ ಮೂಲ ಸಮಸ್ಯೆಗಳ ಬಗ್ಗೆ ತಿಳಿಸುತ್ತಿಲ್ಲ. ಅದನ್ನು ಬಿಟ್ಟು ನಮಗೆ ವರ್ಗಾವಣೆ ಮಾಡಿಸಿ, ಬಡ್ತಿ ನೀಡಿ ಎನ್ನುವ ನಾನಾ ರೀತಿಯ ನೌಕರರ ಸಮಸ್ಯೆಗಳೇ ಹೆಚ್ಚಾಗಿವೆ. ಇವುಗಳನ್ನು ಬಿಟ್ಟು ಸಮುದಾಯದ ಜನಸಾಮಾನ್ಯರ ಬಗ್ಗೆ ಚಿಂತಿಸಬೇಕು.

ಪುಸ್ತಕ, ಸಮವಸ್ತ್ರ, ಆಹಾರ ಸೇರಿದಂತೆ ನಾನಾ ಯೋಜನೆಗಳನ್ನು ರೂಪಿಸಿ ಸರ್ಕಾರ ನಮ್ಮ ಮಕ್ಕಳಿಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದೆ. ಆದರೆ, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಲ್ಲಿ ವಿಫಲರಾಗುತ್ತಿದ್ದೇವೆ ಎಂದರು.

ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ಸಮಾಜದಲ್ಲಿನ ತಪ್ಪುಗಳನ್ನು ನಿಂದಿಸುವ ಬದಲು ಪರಿಹಾರ ಕಂಡುಕೊಳ್ಳಬೇಕು. ಎಲ್ಲರೂ ಒಗ್ಗಟ್ಟಿನಿಂದ ಸಮುದಾಯದ ಅಭಿವೃದ್ಧಿಗೆ ಪ್ರಯತ್ನಿಸಬೇಕು. ಸಮಸ್ಯೆಗಳು ಉದ್ಭವಿಸುವ ಮೊದಲೇ ಎಚ್ಚೆತ್ತು ಸಂಘಟನೆಯಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು.

ಅಧಿಕಾರದಲ್ಲಿರುವವರಿಂದ ಮಾತ್ರ ಸಮಾಜದ ಉದ್ಧಾರ ಸಾಧ್ಯ. ಆದ್ದರಿಂದ ಸಮಾಜದ ನೌಕರರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮುದಾಯದ ಅಭಿವೃದ್ಧಿಗೆ ಶ್ರಮ ವಹಿಸಬೇಕಾಗಿದೆ ಎಂದರು.ಇದೇ ಸಂದರ್ಭದಲ್ಲಿ ಮೊದಲ ಬಾರಿಗೆ ಐಎಎಸ್ ಪಾಸು ಮಾಡಿದ ದಾವಣಗೆರೆ ವಾಸಿ ಜೀವನ್ ಅವರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.