ಭಾನುವಾರ, ಜೂನ್ 13, 2021
21 °C

ಜನಸ್ಪಂದನ ಸಭೆಗೆ ಗೈರು: ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ: ತಾಲ್ಲೂಕಿನ ದೊಡ್ಡಸಣ್ಣೆ ಗ್ರಾಮದಲ್ಲಿ ಶನಿವಾರ ಗ್ರಾಮ ಪಂಚಾಯಿತಿ ಹಮ್ಮಿಕೊಂಡಿದ್ದ ಜನಸ್ಪಂದನ ಸಭೆಗೆ  ಜನಪ್ರತಿನಿಧಿಗಳು ಗೈರಾಗುವ ಮೂಲಕ ಸಭೆಯ ವಿಫಲತೆಗೆ ಕಾರಣರಾಗಿದ್ದಾರೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದು ಕೊರತೆಗಳಿಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಜನಸ್ಪಂದನ ಸಭೆಯನ್ನು  ಬೆಳಿಗ್ಗೆ 11ಕ್ಕೆ ಆಯೋಜಿಸಲಾಗಿತ್ತು.ಈ ಬಗ್ಗೆ ಕರಪತ್ರ ವಿತರಿಸಲಾಗಿತ್ತು. ಶಾಸಕರು, ತಾ.ಪಂ. ಅಧ್ಯಕ್ಷ ಹಾಗೂ ಉಪಾಧ್ಯಕ್ಷೆ, ಜಿ.ಪಂ.ಸದಸ್ಯೆ, ತಾ.ಪಂ.ಸದಸ್ಯರು, ಗ್ರಾ.ಪಂ.ಅಧ್ಯಕ್ಷರು ಸಭೆಗೆ ಹಾಜರಾಗಿ ಸಮಸ್ಯೆ ನಿವಾರಿಸುತ್ತಾರೆ ಎಂದು ಸಾರ್ವಜನಿಕರು ನಿರೀಕ್ಷಿಸಿದ್ದರು. ಆದರೆ ಯಾವೊಬ್ಬ ಜನಪ್ರತಿನಿಧಿಯೂ ಸಭೆಗೆ ಹಾಜರಾಗಲಿಲ್ಲ. ಅಲ್ಲದೆ ಕೆಲವು ಅಧಿಕಾರಿಗಳು ಮಾತ್ರ ಸಭೆಗೆ ಹಾಜರಾಗಿದ್ದರು.ಜನಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ  12.40ಕ್ಕೆ ಸಭೆ ಆರಂಭಿಸಲಾಯಿತಾದರೂ, ಜನರೂ ಸೇರಲಿಲ್ಲ. ಸಭೆಯಲ್ಲಿ 8-10 ವಿದ್ಯಾರ್ಥಿಗಳನ್ನು ಬಲವಂತವಾಗಿ ುಳ್ಳಿರಿಸಲಾಗಿತ್ತು.   40ರಿಂದ 50 ಸಾವಿರ ರೂಪಾಯಿ ಖರ್ಚು ಮಾಡಿ ಸಭೆಯನ್ನು ಆಯೋಜಿಸಲಾಗಿದೆ. ಆದರೆ ಜನಪ್ರತಿನಿಧಿಗಳ ಬೇಜಾವಾಬ್ದಾರಿಯಿಂದ ಸಭೆ ವಿಫಲವಾಯಿತು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.ಸಭೆಯಲ್ಲಿ ಹಾಜರಿದ್ದ ಕ್ಷೇತ್ರಶಿಕ್ಷಣಾಧಿಕಾರಿ ಹನುಮಂತಪ್ಪ ಮಾತನಾಡಿ,  ಸರ್ಕಾರ ಗುಣಮಟ್ಟದ ಶಿಕ್ಷಣ ನೀಡಲು  ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸುತ್ತಿದೆ.   ಏಪ್ರಿಲ್ 2ರಿಂದ ದಾಖಲಾತಿ ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು. ತಾಲ್ಲೂಕಿನಲ್ಲಿ ಒಟ್ಟು 226 ಸರ್ಕಾರಿ ಪ್ರಾಥಮಿಕ ಮತ್ತು 17ಪ್ರೌಢಶಾಲೆಗಳಿವೆ.  ಪ್ರಾಥಮಿಕ ಶಾಲೆಯಲ್ಲಿ ಹಾಜರಾತಿ ಹೆಚ್ಚಳ ನಿಟ್ಟಿನಲ್ಲಿ ಏಪ್ರಿಲ್ 10ರವರೆಗೂ ಬಿಸಿಯೂಟ ಮುಂದುವರಿಯಲಿದ್ದು ಸರ್ಕಾರದ ಶೈಕ್ಷಣಿಕ ಯೋಜನೆಗಳ ಬಗ್ಗೆ ಶಿಕ್ಷಕರು ಮನವರಿಕೆ ಮಾಡುವ ಅಗತ್ಯವಿದೆ ಎಂದರು.ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ರಾಮಪ್ಪ, ತೋಟಗಾರಿಕೆ ಇಲಾಖೆ ಅಧಿಕಾರಿ ಗೋಪಾಲ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮುನೇಗೌಡ ಇಲಾಖೆಯ ಯೋಜನೆಗಳ ಬಗ್ಗೆ  ಮಾಹಿತಿ ನೀಡಿದರು. ಗ್ರಾ.ಪಂ.ಸದಸ್ಯ ಚಂದ್ರಶೇಖರ್ ಪಂಚಾಯಿತಿ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ವಿದ್ಯುತ್ ಪರಿವರ್ತಕ ನೀಡುವಂತೆ ಬೆಸ್ಕಾಂಗೆ ಮನವಿ ಮಾಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.