ಶನಿವಾರ, ಮೇ 15, 2021
22 °C

ಜನಾಂಗೀಯ ಕಲಹ: ಒಂಬತ್ತು ಜನರ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೋಸ್ (ನೈಜೀರಿಯಾ): ಜನಾಂಗೀಯ ಕಲಹದಿಂದ ನರಳುತ್ತಿರುವ ನೈಜೀರಿಯಾದ ಮಧ್ಯ ಭಾಗದ ಗ್ರಾಮವೊಂದರಲ್ಲಿ ಶುಕ್ರವಾರ ಒಂಬತ್ತು ಜನರನ್ನು ಹತ್ಯೆ ಮಾಡಲಾಗಿದೆ. ಇವರಲ್ಲಿ ಏಳು ಜನರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ ಎಂದು ಅಧಿಕೃತ ವರದಿಗಳು ತಿಳಿಸಿವೆ.ಜೋಸ್ ನಗರದ ಹೊರವಲಯದ ಬಾರ್ಕಿನ್ ಲಾದಿ ಎಂಬ ಗ್ರಾಮದಲ್ಲಿ ಈ ಹತ್ಯೆ ನಡೆದಿದ್ದು, ಇಲ್ಲಿ ಕ್ರಿಶ್ಚಿಯನ್ ಧರ್ಮೀಯರೇ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದಾರೆ. ಈ ಪ್ರದೇಶದಲ್ಲಿ ಮುಸ್ಲಿಮರು ಹಾಗೂ ಕ್ರಿಶ್ಚಿಯನ್ ಧರ್ಮೀಯರ ನಡುವೆ ಇತ್ತೀಚಿನ ವರ್ಷಗಳಲ್ಲಿ ತೀವ್ರ ಜನಾಂಗೀಯ ಕಲಹ ಗಳು ಸಂಭವಿಸುತ್ತಲೇ ಇವೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.