ಮಂಗಳವಾರ, ಜನವರಿ 28, 2020
24 °C

ಜನಾದೇಶ ಪಡೆಯಲು ಸವಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: `ಆಂತರಿಕ ಕಚ್ಚಾಟದಲ್ಲಿ ನಿರತವಾಗಿರುವ ಬಿಜೆಪಿ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಜನತೆ ರೋಸಿಹೋಗಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ ಎನ್ನುವ ವಿಶ್ವಾಸ ಬಿಜೆಪಿ ಸರ್ಕಾರಕ್ಕೆ ಇದ್ದರೆ ಕೂಡಲೇ ವಿಧಾನಸಭೆಯನ್ನು ವಿಸರ್ಜಿಸಿ ಹೊಸದಾಗಿ ಜನಾದೇಶ ಪಡೆಯಲಿ~ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಇಲ್ಲಿ ಸವಾಲು ಹಾಕಿದರು.`ಬಿಜೆಪಿಯಲ್ಲಿನ ಆಂತರಿಕ ಭಿನ್ನಾಭಿಪ್ರಾಯ ಮುಗಿಲು ಮುಟ್ಟಿದ್ದು, ಮುಖ್ಯಮಂತ್ರಿ ಮತ್ತು ಮಾಜಿ ಮುಖ್ಯಮಂತ್ರಿ ಒಬ್ಬರ ಬೆನ್ನಿಗೊಬ್ಬರು ಚೂರಿ ಹಾಕಿಕೊಳ್ಳುವುದು ಮಾತ್ರ ಬಾಕಿ ಉಳಿದಿದೆ~ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಕುಟುಕಿದರು.

 

ಪ್ರತಿಕ್ರಿಯಿಸಿ (+)