ಶುಕ್ರವಾರ, ಸೆಪ್ಟೆಂಬರ್ 20, 2019
28 °C

ಜನಾರ್ದನರೆಡ್ಡಿ ಆಪ್ತರ ಮೇಲೆ ಸಿಬಿಐ ದಾಳಿ

Published:
Updated:

ಬಳ್ಳಾರಿ (ಪಿಟಿಐ): ಅಕ್ರಮ ಗಣಿಗಾರಿಕೆ ಆರೋಪದಡಿ ಸಿಬಿಐನಿಂದ ಬಂಧಿತರಾಗಿರುವ ಮಾಜಿ ಸಚಿವ ಜನಾರ್ದನರೆಡ್ಡಿ ಅವರ ಇಲ್ಲಿನ ಆಪ್ತರ ಮೇಲೆ ಸಿಬಿಐ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.11 ಸದಸ್ಯರ ಸಿಬಿಐ ತಂಡ ಭಾನುವಾರ ಬೆಳಿಗ್ಗೆ ಬಳ್ಳಾರಿ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗುರುಲಿಂಗ ಗೌಡ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ರಾಜಶೇಖರಗೌಡ ಅವರ ನಿವಾಸಗಳ ಮೇಲೆ ದಾಳಿ ನಡೆಸಿ ಹುಡುಕಾಟ ನಡೆಸಿತು.ಹಲವು ದಾಖಲೆಗಳನ್ನು ಸಿಬಿಐ ತನ್ನ ವಶಕ್ಕೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ.

Post Comments (+)