ಗುರುವಾರ , ಜೂನ್ 24, 2021
30 °C

ಜನಾರ್ದನರೆಡ್ಡಿ ಮಾರ್ಚಿ 12ರವರೆಗೆ ಸಿಬಿಐ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು (ಐಎಎನ್‌ಎಸ್): ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ನ್ಯಾಯಾಲಯವು ಶುಕ್ರವಾರ ಮಾರ್ಚಿ 12ರ ವರೆಗೆ ಸಿಬಿಐ ವಶಕ್ಕೆ ಒಪ್ಪಿಸಿದೆ.ಇಲ್ಲಿನ ಹೆಚ್ಚುವರಿ ಸಿವಿಲ್ ಹಾಗೂ ಸೆಷೆನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ.ಎಂ. ಅಂಗಡಿ ಅವರು ಆರೋಪಿಗಳನ್ನು ತನ್ನ ವಶಕ್ಕೆ ಒಪ್ಪಿಸಬೇಕೆಂದು ಸಿಬಿಐ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದರು.ಜನಾರ್ದನರೆಡ್ಡಿ ಹಾಗೂ ಅವರ ಪತ್ನಿ ಲಕ್ಷ್ಮಿ ಅರುಣಾ ಅಕ್ರಮ ಗಣಿಗಾರಿಕೆ ಸಂಬಂಧ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ಸೆಪ್ಟಂಬರ್ 5 ರಂದು ಸಿಬಿಐ ನಿಂದ ಬಂಧಿತರಾಗಿದ್ದ ರೆಡ್ಡಿ ಅವರನ್ನು ಆಂಧ್ರಪ್ರದೇಶದ ಹೈದರಾಬಾದಿನ ಜೈಲಿನಲ್ಲಿರಿಸಲಾಗಿತ್ತು. ಶುಕ್ರವಾರವಷ್ಟೆ ಅವರನ್ನು ನಗರಕ್ಕೆ ಕರೆತರಲಾಗಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.