ಭಾನುವಾರ, ಮೇ 9, 2021
25 °C

ಜನಾರ್ದನ ರೆಡ್ಡಿ ಜಾಮೀನು ಅರ್ಜಿ ತಿರಸ್ಕೃತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್ (ಐಎಎನ್‌ಎಸ್): ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿ ಇರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಓಬಳಾಪುರಂ ಗಣಿ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಬಿ. ವಿ. ಶ್ರೀನಿವಾಸ್ ರೆಡ್ಡಿ ಅವರ ಜಾಮೀನು ಅರ್ಜಿಯನ್ನು ಆಂಧ್ರಪ್ರದೇಶ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ.



ಕಳೆದ ವಾರ ತಮ್ಮ ಆದೇಶವನ್ನು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೆ. ಜಿ. ಶಂಕರ್ ಅವರು ಜಾಮೀನು ತಿರಸ್ಕರಿಸಿದ ಆದೇಶವನ್ನು ಪ್ರಕಟಿಸಿದರು.ಈ ಇಬ್ಬರಿಗೆ ಜಾಮೀನು ನೀಡಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಿ ತನಿಖೆಗೆ ಅಡ್ಡಿಪಡಿಸುವ ಸಾಧ್ಯತೆಗಳು ಇವೆ ಎಂಬ ಸಿಬಿಐ ಪರ ವಕೀಲರ ವಾದವನ್ನು ನ್ಯಾಯಮೂರ್ತಿಗಳು ಒಪ್ಪಿಕೊಂಡಿದ್ದಾರೆ.



ವಿಚಾರಣಾ ನ್ಯಾಯಾಲಯವು ಜನಾರ್ದನ ರೆಡ್ಡಿ ಮತ್ತು ಶ್ರೀನಿವಾಸ ರೆಡ್ಡಿಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿತ್ತು. ಇದನ್ನು  ಪ್ರಶ್ನಿಸಿ ಇಬ್ಬರೂ ಆಂಧ್ರಪ್ರದೇಶ    ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿದ್ದರು. ಈಗ ಅಲ್ಲಿಯೂ ಅರ್ಜಿ ತಿರಸ್ಕೃತವಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.