ಬುಧವಾರ, ಮೇ 12, 2021
18 °C

ಜನ ಪ್ರತಿನಿಧಿಗಳಿಗೆ ಎಚ್ಚರಿಕೆಯ ಪಾಠ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚುನಾಯಿತ ಪ್ರತಿನಿಧಿಗಳು ಜನರ ನಿರೀಕ್ಷೆಗಳಿಗೆ ತಕ್ಕಂತೆ ವರ್ತಿಸದಿದ್ದರೆ ಅವರಿಗೆ ಉಳಿಗಾಲವಿಲ್ಲ ಎನ್ನುವುದಕ್ಕೆ ಒಡಿಶಾದ ಬಿಜೆಡಿ ಪಕ್ಷದ ಶಾಸಕ ಜಿನಾ ಹಿಕಾಕ ಉತ್ತಮ ಉದಾಹರಣೆ. ಹಿಕಾಕ ಜನರ ಹಿತಕ್ಕೆ ವಿರುದ್ಧವಾಗಿ ವರ್ತಿಸುತ್ತಿದ್ದರು ಎಂಬ ಆರೋಪಗಳಿದ್ದವು.ಅವರನ್ನು ಮಾವೊವಾದಿಗಳು ಅಪಹರಿಸಿ ವಿಚಾರಣೆ ನಡೆಸಿ, ಅವರಿಂದ ಪಕ್ಷಕ್ಕೆ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ವಾಗ್ದಾನ ಪಡೆದುಕೊಂಡು ಬಿಡುಗಡೆ ಮಾಡಿದ್ದಾರೆ. ಈ ಕೃತ್ಯಗಳು ಜನತಂತ್ರ ವ್ಯವಸ್ಥೆಗೆ ವಿರುದ್ಧವಾದರೂ ಜನ ಹಿತ ಮರೆತ ಚುನಾಯಿತ ಪ್ರತಿನಿಧಿಗಳಿಗೆ ಎಚ್ಚರಿಕೆಯ ಪಾಠವಾಗಿದೆ.ಹಿಕಾಕ ಪ್ರಕರಣದಿಂದ ದೇಶದ ಚುನಾಯಿತ ಪ್ರತಿನಿಧಿಗಳು ಪಾಠ ಕಲಿಯಬೇಕು. ಒಮ್ಮೆ ಆಯ್ಕೆಯಾದ ನಂತರ ಐದು ವರ್ಷಗಳ ಕಾಲ ಅಧಿಕಾರ ಅನುಭವಿಸಿ, ಅಕ್ರಮವಾಗಿ ಹಣ ಮಾಡಿಕೊಂಡು ಮನೆಯಲ್ಲಿ ಕುಳಿತು ಬಿಡುವ ರಾಜಕಾರಣಿಗಳಿಗೆ ಬುದ್ದಿ ಕಲಿಸುವುದು ಹೇಗೆ ಎಂಬುದು ಜನರಿಗೆ ಗೊತ್ತಿರಲಿಲ್ಲ. ಒಡಿಶಾದ ಮಾವೊವಾದಿಗಳು ಅದನ್ನು ದೇಶದ ಜನರಿಗೆ ತೋರಿಸಿಕೊಟ್ಟಿದ್ದಾರೆ ಎಂದು ಈ ಪ್ರಕರಣವನ್ನು ಅರ್ಥೈಸಬಹುದೇ?

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.