ಶುಕ್ರವಾರ, ಫೆಬ್ರವರಿ 26, 2021
20 °C

ಜಪಾನ್‌ನಲ್ಲಿ ಪ್ರಬಲ ಭೂಕಂಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಪಾನ್‌ನಲ್ಲಿ ಪ್ರಬಲ ಭೂಕಂಪ

ಟೋಕಿಯೋ (ಪಿಟಿಐ): ಉತ್ತರ  ಜಪಾನ್‌ ಭಾಗದಲ್ಲಿ  ಬುಧವಾರ ತಡ ರಾತ್ರಿ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.7ರಷ್ಟು ತೀವ್ರತೆ ದಾಖಲಾಗಿದ್ದು, ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ. ಭೂಕಂಪದ ಕೇಂದ್ರ ಬಿಂದು ಹೊಕಾಯ್ಡೊ ಕರಾವಳಿ ತೀರ ಪ್ರದೇಶದ  ಸಮುದ್ರದ  50 ಕಿ.ಮೀ. ಆಳದಲ್ಲಿ ಕೇಂದ್ರಿಕೃತವಾಗಿದೆ ಎಂದು ಜಪಾನ್‌ನ ಭೂಕಂಪ ಮಾಪನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.ಹೊಕಾಯ್ಡೊ ಮತ್ತು ಉರಕವಾ ನಗರಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗುತ್ತಿದಂತೆ ಜನರು ಮನೆಯಿಂದ ಹೊರಗೆ ಬಂದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.ಇಲ್ಲಿಯವರೆಗೂ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ ಹಾಗೂ ಜಪಾನ್‌ ಸರ್ಕಾರ ಸುನಾಮಿ ಎಚ್ಚರಿಕೆಯನ್ನು ನೀಡಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.