ಮಂಗಳವಾರ, ಮೇ 11, 2021
21 °C

`ಜಯದೇವ ಆಸ್ಪತ್ರೆ ಹಿತ ಕಾಪಾಡಿ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ನಗರದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಬೆಳವಣಿಗೆ ಹಾಗೂ ರೋಗಿಗಳಿಗೆ ಸಿಗುತ್ತಿರುವ ಚಿಕಿತ್ಸೆಯ ಹಿನ್ನೆಲೆಯಲ್ಲಿ ಆಸ್ಪತ್ರೆಯ ಆವರಣದಲ್ಲಿ ಮೆಟ್ರೊ ರೈಲು ಬರಬಾರದು' ಎಂದು ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ ಆಗ್ರಹಿಸಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿರುವ ಅವರು, `ಸಂಸ್ಥೆಯ ಆವರಣದಲ್ಲಿ ಮೆಟ್ರೊ ನಿಲ್ದಾಣವನ್ನು ಸ್ಥಾಪನೆ ಮಾಡಲು ಮುಂದಾಗಿರುವುದು ಆಶ್ವರ್ಯ ತಂದಿದೆ. ಮೆಟ್ರೊ ರೈಲಿನ ನೀಲಿ ನಕಾಶೆಯನ್ನು ತಯಾರಿಸುವಾಗ ಈ ಪಥ ಇರಲಿಲ್ಲ. ಸಂಸ್ಥೆಯ ಹಿತಕ್ಕೆ ಧಕ್ಕೆ ಬಾರದಂತೆ ಕಾಮಗಾರಿ ಕೈಗೆತ್ತಿಕೊಳ್ಳಬೇಕು' ಎಂದು ವಿನಂತಿಸಿದ್ದಾರೆ.`ಹೃದಯ ರೋಗಿಗಳಿಗೆ ಉನ್ನತ ಮಟ್ಟದ ಚಿಕಿತ್ಸೆಯನ್ನು ನೀಡುವ ಉದ್ದೇಶದಿಂದ 1983-84ರಲ್ಲಿ ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದಾಗ ವಿಕ್ಟೋರಿಯಾ ಆಸ್ಪತ್ರೆಯಿಂದ ಬೇರ್ಪಡಿಸಿ ಒಂದು ಸ್ವಾಯತ್ತ ಸಂಸ್ಥೆಯನ್ನಗಿ ನಾವು, ನೀವು ಕೂಡಿ ಮಾಡಿದ್ದೆವು.

ಈ ಸಂಸ್ಥೆಗೆ ಈಗಿರುವ ನಿವೇಶನವನ್ನು ಒದಗಿಸಲು ಆವತ್ತಿನ ನಿರ್ದೇಶಕರಾಗಿದ್ದ ಡಾ.ಚಿನ್ನಯ್ಯ ಅವರು ಮಾಡಿದ ಹೋರಾಟ ಅವಿಸ್ಮರಣೀಯವಾದುದು. ಸಂಸ್ಥೆಯ ಬೆಳವಣಿಗೆಯನ್ನು ತೀರಾ ಹತ್ತಿರದಿಂದ ಗಮನಿಸಿದ್ದೇನೆ. 30 ವರ್ಷಗಳಲ್ಲಿ ಅಪಾರ ಕೆಲಸ ಮಾಡಿ ರಾಷ್ಟ್ರ ಮಟ್ಟದ ಸಂಸ್ಥೆಯಾಗಿ ಬೆಳೆದಿದೆ' ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.