ಚೆನ್ನೈ (ಪಿಟಿಐ) : ಅಣ್ಣಾಡಿಎಂಕೆ ಪಕ್ಷದ ಮುಖ್ಯಸ್ಥೆ ಮತ್ತು ಮುಖ್ಯಮಂತ್ರಿ ಜಯಲಲಿತಾ ಅವರನ್ನು ಭವಿಷ್ಯದ ಪ್ರಧಾನಿಯನ್ನಾಗಿ ಮಾಡುವುದು ನಮ್ಮ ಗುರಿ. ಇದಕ್ಕೆ ಪೂರಕ ವಾತಾವರಣ ಸೃಷ್ಟಿಸಲು ಒಗ್ಗೂಡಿ ಕೆಲಸ ಮಾಡುತ್ತೇವೆ ಎಂದು ಪಕ್ಷದ ಬೆಂಬಲಿಗರು ಮಂಗಳವಾರ ಪ್ರತಿಜ್ಞೆ ಕೈಗೊಂಡಿದ್ದಾರೆ.

ಅಣ್ಣಾಡಿಎಂಕೆ ಸಂಸ್ಥಾಪಕ ಎಂ. ಜಿ. ರಾಚಂದ್ರನ್ (ಎಂಜಿಆರ್) ಅವರ 26ನೇ ಪುಣ್ಯಸ್ಮರಣೆ ಸಂದರ್ಭದಲ್ಲಿ ಪಕ್ಷದ ಬೆಂಬಲಿಗರು ಈ ಪ್ರತಿಜ್ಞೆ ಮಾಡಿದ್ದಾರೆ.ರಾಜ್ಯದಲ್ಲಿ 40 ಸ್ಥಾನಗಳನ್ನು ಗೆಲ್ಲಲು ಒಟ್ಟಾಗಿ ಕೆಲಸ ಮಾಡುವ ಮೂಲಕ ಜಯಲಲಿತಾ ಅವರು ದೇಶವನ್ನು ಮುನ್ನಡೆಸಲು ಸಹಾಯ ಮಾಡುತ್ತೇವೆ ಎಂದು ಅವರು ಪ್ರಮಾಣ ಮಾಡಿದರು.

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ತಮಿಳು ವಿರೋಧಿ ನೀತಿ ಮತ್ತು ಭಾರತೀಯ ಮೀನುಗಾರರ ಮೇಲೆ ಶ್ರೀಲಂಕಾ ಸೇನೆಯ ದಾಳಿಯನ್ನು ಪಕ್ಷ ತೀವ್ರವಾಗಿ ಖಂಡಿಸಿತು.

ದೇಶವನ್ನು ಸೂಪರ್ ಪವರ್ ಆಗಿ ಮಾಡುವ ಅರ್ಹತೆ ಜಯಲಲಿತಾ ಅವರಿಗಿದೆ. ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡುವ ದಿಕ್ಕಿನಲ್ಲಿ ಪಕ್ಷ ಕಾರ್ಯನಿರ್ವಹಿಸಲಿದೆ ಎಂದು ಅಣ್ಣಾಡಿಎಂಕೆ ಪಕ್ಷದ ಕಾರ್ಯಕಾರಿಣಿ ಮತ್ತು ಸಾಮಾನ್ಯ ಸಭೆ ಡಿಸೆಂಬರ್ 19ರಂದು ತಿಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.