ಮಂಗಳವಾರ, ಮೇ 11, 2021
27 °C

ಜಯಲಲಿತಾ ಪ್ರಕರಣ: ಸೆ.14ಕ್ಕೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು (ಪಿಟಿಐ): ಇಲ್ಲಿನ ವಿಶೇಷ ನ್ಯಾಯಾಲಯವು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಯನ್ನು ಸೆ. 14ಕ್ಕೆ ಮುಂದೂಡಿದೆ.ಈ ಪ್ರಕರಣದ ವಿಚಾರಣೆಯಲ್ಲಿ ಜಯಲಲಿತಾ ಅವರ ಖುದ್ದು ಹಾಜರಾತಿಯಿಂದ ವಿನಾಯಿತಿ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ದಾಖಲಾದ ಅರ್ಜಿಯ ವಿಚಾರಣೆಯನ್ನು ಸೋಮವಾರ ಕೈಗೆತ್ತಿಕೊಂಡಿದ್ದ  ನ್ಯಾಯಪೀಠ ಅದನ್ನು ಸೆ. 12ಕ್ಕೆ ಮುಂದೂಡಿತ್ತು.

ಮಂಗಳವಾರ ಇಲ್ಲಿಯ ವಿಶೇಷ ನ್ಯಾಯಾಲಯದಲ್ಲಿ  ಜಯಲಲಿತಾ ಅವರ ಅಕ್ರಮ ಆಸ್ತಿ ಪ್ರಕರಣದ ಕುರಿತು ವಿಚಾರಣೆ ಆರಂಭವಾದಾಗ, ಜಯಲಲಿತಾ ಅವರ ವಕೀಲ ಎ. ಕಂದಸಾಮಿ ಅವರು,  ಸುಪ್ರೀಂ ಕೋರ್ಟ್ ನಲ್ಲಿ ಖುದ್ದು ಹಾಜರಿ ವಿನಾಯಿತಿಯ ಕುರಿತು ವಿಚಾರಣೆ ನಡೆಯುತ್ತಿದ್ದು,  ಸೆ 12 ರಂದು ತೀರ್ಮಾನ ಪ್ರಕಟಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿ, ಸಿಆರ್‌ಪಿಸಿ ಸೆಕ್ಷನ್ 309ರ ಅಡಿಯಲ್ಲಿ ಅರ್ಜಿ ಸಲ್ಲಿಸಿ ಎರಡು ವಾರಗಳ ಕಾಲ ಇಲ್ಲಿನ ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಮನವಿ ಮಾಡಿಕೊಂಡರು.ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಅರ್ಜಿದಾರರ ಪರ ವಕೀಲರ ವಿಶೇಷ ಮನವಿಗೆ ಸಹಾಯಕ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಂದೇಶ್ ಚೌತ ಅವರು ಸಮ್ಮತಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.