ಚೆನ್ನೈ (ಪಿಟಿಐ): ಶ್ರೀಲಂಕಾದ ಗಣ್ಯ ವ್ಯಕ್ತಿಗಳು ತಮಿಳುನಾಡಿಗೆ ಭೇಟಿ ನೀಡುವ ಮುನ್ನ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಬೇಕೆಂಬ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅಭಿಪ್ರಾಯವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಲಿದೆ ಎಂದು ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಭರವಸೆ ನೀಡಿದರು.

`ನಮ್ಮದು ಒಕ್ಕೂಟ ವ್ಯವಸ್ಥೆ. ಎಲ್ಲ ರಾಜ್ಯಗಳ ಬಗ್ಗೆ ನಮಗೆ ಅಪಾರ ಗೌರವ ಇದೆ. ಪ್ರತಿ ರಾಜ್ಯದ ಅಭಿಪ್ರಾಯವನ್ನೂ ಗಂಭೀರವಾಗಿ ಆಲಿಸಿ, ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು~ ಎಂದು ಅವರು ಗುರುವಾರ ಇಲ್ಲಿ ವರದಿಗಾರರಿಗೆ ತಿಳಿಸಿದರು.

ರಾಜ್ಯ ಸರ್ಕಾರದ ಅರಿವಿಗೇ ಬಾರದಂತೆ ಶ್ರೀಲಂಕಾದ ಗಣ್ಯ ವ್ಯಕ್ತಿಗಳು ತಮಿಳುನಾಡಿಗೆ ಭೇಟಿ ನೀಡುತ್ತಿರುವುದನ್ನು ಆಕ್ಷೇಪಿಸಿ ಜಯಲಲಿತಾ ಬುಧವಾರ ಪ್ರಧಾನಿಗೆ ಪತ್ರ ಬರೆದಿದ್ದರು. ಶ್ರೀಲಂಕಾದಲ್ಲಿರುವ ತಮಿಳರ ಹಕ್ಕು ರಕ್ಷಣೆಯಲ್ಲಿ ಅಲ್ಲಿನ ಸರ್ಕಾರ ವಿಫಲವಾಗಿದೆ ಎಂಬುದು ರಾಜ್ಯದ ಜನರ ಅಭಿಪ್ರಾಯ; ಹೀಗಾಗಿ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿದ ಬಳಿಕವಷ್ಟೇ ಅಲ್ಲಿನ ಗಣ್ಯರು ತಮಿಳುನಾಡಿಗೆ ಬರಲು ಅವಕಾಶ ಕಲ್ಪಿಸಬೇಕು ಎಂದು ಕೋರಿದ್ದರು.

ಪರಿಶೀಲಿಸಿ ನಿರ್ಧಾರ: `ಯುದ್ಧ ಅಪರಾಧಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ ಶ್ರೀಲಂಕಾ ವಿರುದ್ಧ ನಿರ್ಣಯ ಅಂಗೀಕರಿಸಲು ಮುಂದಾಗಿರುವ ಅಮೆರಿಕವನ್ನು ಬೆಂಬಲಿಸುವಂತೆ ಎಐಎಡಿಎಂಕೆ, ಕಾಂಗ್ರೆಸ್ ಮತ್ತು ಡಿಎಂಕೆ ಬೇಡಿಕೆ ಇಟ್ಟಿವೆ. ಭಾರತ ಮತ್ತು ಶ್ರೀಲಂಕಾ ನಡುವಿನ ಬಾಂಧವ್ಯ ಸೇರಿದಂತೆ ಹಲವು ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿ ಕೇಂದ್ರ ಸರ್ಕಾರ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ~ ಎಂದು ಕೃಷ್ಣ ತಿಳಿಸಿದರು.

ಶ್ರೀಲಂಕಾದಲ್ಲಿ ಸ್ಥಳಾಂತರಗೊಂಡಿರುವ ತಮಿಳು ಭಾಷಿಕರಿಗೆ ಎಲ್ಲ ರೀತಿಯ ನೆರವು ನೀಡಲಾಗಿದೆ ಎಂದರು.
ಕೇಂದ್ರ ಸರ್ಕಾರವು, ಫುಕುಶಿಮಾ ಪರಮಾಣು ದುರಂತದ ಅನುಭವಗಳನ್ನು ಹಂಚಿಕೊಳ್ಳಲು ಭಾರತಕ್ಕೆ ಭೇಟಿ ನೀಡಬೇಕಿದ್ದ ಜಪಾನ್ ಪ್ರಜೆಯೊಬ್ಬರ ವೀಸಾ ತಿರಸ್ಕರಿಸಲು ಕಾರಣವೇನು? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೆಲವು ನಿರ್ದಿಷ್ಟ ವಿಷಯಗಳಲ್ಲಿ ತೀರ್ಮಾನ ಕೈಗೊಳ್ಳುವ ವಿಶೇಷ ಅಧಿಕಾರ ಕೇಂದ್ರಕ್ಕೆ ಇದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.