ಜಯಾ ವಿರುದ್ಧ ಡಿಎಂಕೆ ಆಕ್ರೋಶ

ಸೋಮವಾರ, ಜೂಲೈ 15, 2019
25 °C

ಜಯಾ ವಿರುದ್ಧ ಡಿಎಂಕೆ ಆಕ್ರೋಶ

Published:
Updated:

ಚೆನ್ನೈ, (ಪಿಟಿಐ): 2ಜಿ ತರಂಗಾಂತರ ಹಗರಣಕ್ಕೆ ಸಂಬಂಧಿಸಿ ಜವಳಿ ಸಚಿವ ದಯಾನಿಧಿ ಮಾರನ್ ಅವರ ರಾಜೀನಾಮೆಗೆ ಒತ್ತಾಯಿಸಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ವಿರುದ್ಧ ಡಿಎಂಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.`ಜಯಲಲಿತಾ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣಗಳು ದಾಖಲಾಗ್ದ್ದಿದರೂ ಕೂಡ ಅವರು ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿದ್ದರೇ?  ಹಾಗಿದ್ದಲ್ಲಿ ಮಾರನ್ ಅವರು ಏಕೆ ರಾಜೀನಾಮೆ ನೀಡಬೇಕು?~ ಎಂದು ಡಿಎಂಕೆ ಹೇಳಿಕೆಯೊಂದರಲ್ಲಿ ಪ್ರಶ್ನಿಸಿದೆ.ಅಕ್ರಮ ಆಸ್ತಿ ಸಂಪಾದನೆಗೆ ಸಂಬಂಧಿಸಿದಂತೆ ಈಗಲೂ ಬೆಂಗಳೂರು ನ್ಯಾಯಾಲಯದಲ್ಲಿ ಜಯಲಲಿತಾ ಅವರು ಸ್ವತಃ ಪ್ರಕರಣ ಇದೆ. ಅಂತಹ ಪರಿಸ್ಥಿತಿಯಲ್ಲಿ ಅವರು ಮಾರನ್ ರಾಜೀನಾಮೆ ನೀಡಬೇಕೆಂದು ಕೇಳುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದು ಡಿಎಂಕೆ ವಕ್ತಾರರು ತಿಳಿಸಿದ್ದಾರೆ. ರರಾದ ಮುತ್ತು ರಾಮಲಿಂಗಂ ಮತ್ತು ಕೆ.ಎಸ್.ರಾಧಾಕೃಷ್ಣನ್ ಅವರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry