ಜಯಾ 64ನೇ ಹುಟ್ಟುಹುಬ್ಬ ಆಚರಣೆ

7

ಜಯಾ 64ನೇ ಹುಟ್ಟುಹುಬ್ಬ ಆಚರಣೆ

Published:
Updated:

ಚೆನೈ(ಪಿಟಿಐ): ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಶುಕ್ರವಾರ 64ನೇ ವರ್ಷಕ್ಕೆ ಕಾಲಿಟ್ಟಿದ್ದು ಅವರಿಗೆ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.ಬಡವರಿಗೆ ವಸ್ತ್ರ, ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಕೆಲವು ಅಗತ್ಯ ನೆರವು ನೀಡುವ ಮೂಲಕ ಜಯಲಲಿತಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.ಜನರ ಅಭಿವೃದ್ಧಿಗಾಗಿ ಕೆಲಸ ಮಾಡಬೇಕು. ಮುಂಬರುವ ಚುನಾವಣೆಯಲ್ಲಿ ತಮಿಳುನಾಡಿನ 39, ಪುದುಚೇರಿಯ ಒಂದು ಸ್ಥಾನ ಸೇರಿದಂತೆ ಒಟ್ಟೂ 40 ಸ್ಥಾನಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು. ಅದೇ  ತಮಗೆ ಕಾರ್ಯಕರ್ತರು ನೀಡುವ ಬಹುದೊಡ್ಡ ಉಡುಗೊರೆ ಎಂದು ಅವರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry