ಸೋಮವಾರ, ಮೇ 10, 2021
21 °C

ಜರ್ದಾರಿ ಜೊತೆ 40 ಸದಸ್ಯರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಖಾಸಗಿ ಭೇಟಿಗಾಗಿ ಈ 8ರಂದು ಭಾರತಕ್ಕೆ ಆಗಮಿಸುತ್ತಿರುವ  ಪಾಕಿಸ್ತಾನ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರೊಂದಿಗೆ ಬರುವ ನಿಯೋಗದಲ್ಲಿ ಒಟ್ಟು 40 ಸದಸ್ಯರಿದ್ದಾರೆ. ಅಜ್ಮೇರ್‌ನಲ್ಲಿರುವ ಖ್ಯಾತ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ದರ್ಗಾಕ್ಕೆ ಜರ್ದಾರಿ  ಭೇಟಿ ನೀಡಲಿದ್ದಾರೆ.

ಭಾರತಕ್ಕೆ ಭೇಟಿ ನೀಡಲಿರುವ ಸಂದರ್ಭದಲ್ಲಿ ಜರ್ದಾರಿ, ಪ್ರಧಾನಿ ಮನಮೋಹನ್‌ಸಿಂಗ್ ಆಯೋಜಿಸಲಿರುವ ಔತಣಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ.ಔತಣಕೂಟಕ್ಕೂ ಮುನ್ನ ಉಭಯನಾಯಕರು ಮಾತುಕತೆ ನಡೆಸಲಿದ್ದಾರೆ. ಆದರೆ, ಯಾವ ವಿಚಾರಗಳ ಕುರಿತು ನಾಯಕರು ಚರ್ಚಿಸಲಿದ್ದಾರೆ ಎಂಬ ಬಗ್ಗೆ ಮಾಹಿತಿ ನೀಡಲು ಮೂಲಗಳು ನಿರಾಕರಿಸಿವೆ. ಪಾಕ್ ಅಧ್ಯಕ್ಷರೊಂದಿಗೆ ಆಗಮಿಸಲಿರುವ ನಿಯೋಗದಲ್ಲಿ ಅವರ ಕುಟುಂಬದ ಸದಸ್ಯರು, ಅಧ್ಯಕ್ಷೀಯ ಕಚೇರಿಯ ಹಿರಿಯ ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಚಿವರೊಬ್ಬರೂ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಸಚಿವರ ಹೆಸರನ್ನು ಬಹಿರಂಗ ಪಡಿಸಲಾಗಿಲ್ಲ.ಜರ್ದಾರಿ ಜೊತೆ ಪಾಕ್ ಗೃಹ ಸಚಿವ ರೆಹಮಾನ್ ಮಲಿಕ್ ಆಗಮಿಸಲಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ,  ಜರ್ದಾರಿ ಹಾಗೂ ಪ್ರಧಾನಿ ಸಿಂಗ್ ನಡುವಿನ ಮಾತುಕತೆಯ ಸಂದರ್ಭದಲ್ಲಿ ಗೃಹ ಸಚಿವ ಪಿ ಚಿದಂಬರಂ ಅವರೂ ಭಾಗವಹಿಸಲಿದ್ದಾರೆಯೇ ಎಂಬ ಪ್ರಶ್ನೆಗೆ, `ಈ ವಿಚಾರದ ಬಗ್ಗೆ ಇನ್ನೂ ಚರ್ಚೆಗಳು ನಡೆಯುತ್ತಿವೆ~ ಎಂದಷ್ಟೇ ಮೂಲಗಳು ತಿಳಿಸಿವೆ.ಇದು ಜರ್ದಾರಿ ಅವರ ಖಾಸಗಿ ಭೇಟಿ ಎಂದು ಮೂಲಗಳು ಒತ್ತಿ ಹೇಳಿದ್ದು, ಒಂದು ವೇಳೆ ಜರ್ದಾರಿ ಅವರಿಗೆ ಯಾವುದೇ ತೊಂದರೆ ಇಲ್ಲದಿದ್ದರೆ ಪ್ರಧಾನಿ ಸಿಂಗ್ ಅವರು ಔತಣಕೂಟವನ್ನು ಏರ್ಪಡಿಸಲಿದ್ದಾರೆ ಎಂಬ ವಿಚಾರವನ್ನು ಪಾಕಿಸ್ತಾನಕ್ಕೆ ತಿಳಿಸಲಾಗಿದೆ ಎಂದು ವಿವರಿಸಿವೆ.ಅಜ್ಮೇರ್: ಪಾಕಿಸ್ತಾನ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರು ಏಪ್ರಿಲ್ 8ರಂದು ಅಜ್ಮೇರ್‌ಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾಗಿರುವ ಸಿದ್ಧತೆಗಳ ಕುರಿತು ಬುಧವಾರ ಹಿರಿಯ ಅಧಿಕಾರಿಗಳು ಸಭೆ ಸೇರಿ ಚರ್ಚಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.