ಗುರುವಾರ , ಮೇ 6, 2021
27 °C

ಜರ್ದಾರಿ ಭೇಟಿ: ಬಿಗಿ ಭದ್ರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಜ್ಮೇರ್ (ಪಿಟಿಐ/ಐಎಎನ್‌ಎಸ್): ಪಾಕ್ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರು ಏಪ್ರಿಲ್ 8ರಂದು ಇಲ್ಲಿಗೆ ಭೇಟಿ ನೀಡುತ್ತಿರುವ ಕಾರಣ ಬಿಗಿ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

`ಭದ್ರತೆಗೆ ಎಷ್ಟು ಸಿಬ್ಬಂದಿಯನ್ನು ನಿಯೋಜಿಸಬೇಕು ಎನ್ನುವುದನ್ನು ಲೆಕ್ಕಹಾಕಲಾಗುತ್ತಿದೆ. ಪೊಲೀಸರು ಸೇರಿದಂತೆ ಸಶಸ್ತ್ರ ಪಡೆ ಮತ್ತು ಸೇನಾ ಸಿಬ್ಬಂದಿಯನ್ನು ನಿಯೋಜಿಸಲು ಚಿಂತಿಸಲಾಗಿದೆ~ ಎಂದು ಅಜ್ಮೇರ್ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಮೀನಾ ತಿಳಿಸಿದ್ದಾರೆ.

ಜರ್ದಾರಿ ಅವರು ಇಲ್ಲಿನ ಖ್ವಾಜಾ ಮೊಯಿದ್ದೀನ್ ಚಿಸ್ತಿ ದರ್ಗಾಕ್ಕೆ ಭೇಟಿ ನೀಡಲು ಆಗಮಿಸುತ್ತಿದ್ದಾರೆ. ಜರ್ದಾರಿ ಅವರು ಕಳೆದ ಒಂದು ದಶಕದಲ್ಲಿ ಈ ಸ್ಥಳಕ್ಕೆ ಭೇಟಿ ನೀಡಿದ ಪಾಕಿಸ್ತಾನದ ನಾಲ್ಕನೇ ನಾಯಕ ಎನಿಸಿಕೊಳ್ಳಲಿದ್ದಾರೆ. ಪ್ರತಿದಿನ ಸಾವಿರಾರು ಪ್ರವಾಸಿಗರನ್ನು ಆಕರ್ಷಿಸುವ ಈ ದರ್ಗಾಕ್ಕೆ ಈ ಮೊದಲು ಪಾಕಿಸ್ತಾನದಿಂದ ದಿ.ಬೆನಜೀರ್ ಭುಟ್ಟೊ, ಮಾಜಿ ಅಧ್ಯಕ್ಷ ಜಿಯಾ-ಉಲ್-ಹಕ್ ಹಾಗೂ ಪರ್ವೇಜ್ ಮುಶ್ರಫ್ ಭೇಟಿ ನೀಡಿದ್ದರು.

ಕಳೆದ ವರ್ಷ ರಾಷ್ಟ್ರಪತಿ ಪ್ರತಿಭಾ ಪಟೇಲ್ ಅವರು ಈ ದರ್ಗಾಕ್ಕೆ ಭೇಟಿ ನೀಡಿದ್ದಾಗ ಒಂದು ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.