ಜರ್ದಾರಿ ವಿಚಾರಣೆಗೆ ವಿಶೇಷ ನ್ಯಾಯಪೀಠ
ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನ ಅಧ್ಯಕ್ಷ ಆಸೀಫ್ ಅಲಿ ಜರ್ದಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಐವರು ನ್ಯಾಯಮೂರ್ತಿಗಳಿರುವ ವಿಶೇಷ ನ್ಯಾಯಪೀಠವನ್ನು ರಚಿಸಿದೆ. ಈ ಪ್ರಕರಣದ ವಿಚಾರಣೆ ಈ ತಿಂಗಳ 12ರಿಂದ ಆರಂಭವಾಗಲಿದೆ.
ಮುಖ್ಯ ನ್ಯಾಯಮೂರ್ತಿ ಇಫ್ತಿಕಾರ್ ಚೌಧರಿ ಅವರ ಮಾರ್ಗದರ್ಶನದಲ್ಲಿ ಈ ವಿಶೇಷ ಪೀಠವನ್ನು ರಚಿಸಲಾಗಿದೆ. ನ್ಯಾಯಮೂರ್ತಿ ಆಸೀಫ್ ಸಯೀದ್ ಖೋಸಾ ಅವರು ಇದರ ಮುಖ್ಯಸ್ಥರಾಗಲಿದ್ದಾರೆ ಎನ್ನಲಾಗಿದೆ. ಅಧ್ಯಕ್ಷ ಜರ್ದಾರಿ ಮೇಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕ್ ಸರ್ಕಾರ ತನಿಖೆಯ ಪುನರಾರಂಭಕ್ಕೆ ಆದೇಶಿಸದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಈ ನ್ಯಾಯಪೀಠ ರಚಿಸಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.