ಜಲತಜ್ಞ ರಾಜೇಂದ್ರ ಸಿಂಗ್‌ಗೆ ಪ್ರಶಸ್ತಿ

7

ಜಲತಜ್ಞ ರಾಜೇಂದ್ರ ಸಿಂಗ್‌ಗೆ ಪ್ರಶಸ್ತಿ

Published:
Updated:

ಗದಗ: ಸಹಕಾರ, ಗ್ರಾಮೀಣಾಭಿವೃದ್ಧಿ, ಜಲ ಸಂವರ್ಧನೆ, ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ  ಕೆ.ಎಚ್‌. ಪಾಟೀಲ ಪ್ರತಿಷ್ಠಾನ ನೀಡುವ ‘ಕೆ.ಎಚ್‌. ಪಾಟೀಲ ಗ್ರಾಮಾಭಿವೃದ್ಧಿ ರಾಷ್ಟ್ರೀಯ ಪ್ರಶಸ್ತಿ’ಗೆ ರಾಜಸ್ತಾನದ ಜಲತಜ್ಞ ರಾಜೇಂದ್ರ ಸಿಂಗ್‌ ಅವರನ್ನು ಆಯ್ಕೆ ಮಾಡಲಾಗಿದೆ ಎಂದು  ಪ್ರತಿಷ್ಠಾನದ ಅಧ್ಯಕ್ಷ ಡಿ.ಆರ್‌. ಪಾಟೀಲ ತಿಳಿಸಿದರು.‘ಕೃಷಿ ಉತ್ಪನ್ನ ಮಾರಾಟ, ಕೃಷಿ ಉತ್ಪನ್ನಗಳ ಸಂಸ್ಕರಣೆ, ಮೌಲ್ಯಾಭಿವೃದ್ಧಿ, ಕೃಷಿ ತಂತ್ರಜ್ಞಾನ, ಜಲ ನಿರ್ವಹಣೆ ಇತರೆ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುವುದು. ಜಲ ಜಾಗೃತಿ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಡಾ.ರಾಜೇಂದ್ರಸಿಂಗ್ ಅವರಿಗೆ 2016ನೇ ಸಾಲಿನ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪ್ರಶಸ್ತಿಯು  ₹ 5 ಲಕ್ಷ ನಗದು ಹಾಗೂ ನೆನಪಿನ ಕಾಣಿಕೆ ಒಳಗೊಂಡಿದೆ. ಇದೇ 16ರಂದು ಇಲ್ಲಿ ನಡೆಯುವ ಕೆ.ಎಚ್.ಪಾಟೀಲ ಜಯಂತ್ಯುತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry