ಶನಿವಾರ, ಮೇ 8, 2021
23 °C

ಜಲಾಶಯಗಳಿಗೆ ಒಳ ಹರಿವು ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ವಿವಿಧೆಡೆ ಭಾನುವಾರವೂ ಸಾಧಾರಣ ಮಳೆ ಮುಂದುವರಿದಿದೆ. ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್, ಕಬಿನಿ, ಹೇಮಾವತಿ, ಲಿಂಗನಮಕ್ಕಿ ಜಲಾಶಯಗಳಿಗೆ ಒಳ ಹರಿವು ಹೆಚ್ಚಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಹಾಗೂ ಭಾನುವಾರ ಬಿಟ್ಟು ಬಿಟ್ಟು ಮಳೆ ಸುರಿದಿದೆ. ಮಂಗಳೂರು ತಾಲ್ಲೂಕಿನ ಪುತ್ತಿಗೆ ಗ್ರಾಮದಲ್ಲಿ ಕೃಷಿಕರೊಬ್ಬರು ಶನಿವಾರ ಹೊಳೆಯಲ್ಲಿ ಕೊಚ್ಚಿಹೋಗಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಮೂಲಗಳು ತಿಳಿಸಿವೆ.

ಪುತ್ತಿಗೆ ಗ್ರಾಮದ ಕಂಚಿಬೈಲು ನಿವಾಸಿ ಪ್ರಕಾಶ ಆಚಾರ್ಯ (29) ಮೃತ ಯುವಕ. ಪ್ರಕಾಶ ಆಚಾರ್ಯ ಅವರ ಮನೆಯ ಕೃಷಿ ಪಂಪ್‌ಸೆಟ್ ಹದಗೆಟ್ಟಿತ್ತು.

ಅದರ ದುರಸ್ತಿಗೆ ಮೆಸ್ಕಾಂ ಅಧಿಕಾರಿಗಳು ಬಂದಿದ್ದರು. ಲೈನ್‌ಮನ್‌ಗಳಿಗೆ ಹೊಳೆಯ ಪಕ್ಕದಲ್ಲಿದ್ದ ವಿದ್ಯುತ್ ಕಂಬ ತೋರಿಸಲು ಕರೆದೊಯ್ಯುವಾಗ ಆಕಸ್ಮಿಕವಾಗಿ ಕಾಲುಜಾರಿ ನಾಗುಹೊಳೆಗೆ ಬಿದ್ದು ಅವರು ಕೊಚ್ಚಿ ಹೋದರು ಎನ್ನಲಾಗಿದೆ.ಜಿಲ್ಲೆಯ ಮಂಗಳೂರು ತಾಲ್ಲೂಕಿನಲ್ಲಿ 35.5 ಮಿ.ಮೀ, ಬಂಟ್ವಾಳ ತಾಲ್ಲೂಕಿನಲ್ಲಿ 45.77 ಮಿ.ಮೀ, ಪುತ್ತೂರು ತಾಲ್ಲೂಕಿನಲ್ಲಿ 47.48 ಮಿ.ಮೀ, ಬೆಳ್ತಂಗಡಿ ತಾಲ್ಲೂಕಿನಲ್ಲಿ 68.6 ಮಿ.ಮೀ, ಸುಳ್ಯ ತಾಲ್ಲೂಕಿನಲ್ಲಿ 54.4 ಮಿ.ಮೀ. ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಮೂಲಗಳು ತಿಳಿಸಿವೆ.ಕೃಷ್ಣರಾಜಸಾಗರ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯಕ್ಕೆ ಕಳೆದ ಮೂರು ದಿನಗಳಲ್ಲಿ ಐದು ಸಾವಿರ ಕ್ಯೂಸೆಕ್‌ಗೂ ಹೆಚ್ಚು ನೀರು ಹರಿದುಬಂದಿದೆ. ಭಾನುವಾರ ಸಂಜೆಯ ವೇಳೆಗೆ ಜಲಾಶಯ ಮಟ್ಟವು 66.85

ಶೆಡ್‌ಗಳಿಗೆ ಹಾನಿ

ವಿಜಾಪುರ ಜಿಲ್ಲೆಯ ಕೊಲ್ಹಾರ ಸಮೀಪದ ಚಿಕ್ಕಗರಸಂಗಿ ಗ್ರಾಮದಲ್ಲಿ ಶನಿವಾರ ರಾತ್ರಿ ಬಿರುಗಾಳಿಯಿಂದ ಸಂತ್ರಸ್ತರ ಪುನರ್ವಸತಿ ಕೇಂದ್ರದ 12 ತಾತ್ಕಾಲಿಕ ಶೆಡ್‌ಗಳ ತಗಡುಗಳ ಛಾವಣಿ ಹಾರಿಹೋಗಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಆಸರೆ ಮನೆಗಳು ಹಂಚಿಕೆಯಾಗದ ಕಾರಣ ಇನ್ನೂ ಕೆಲವರು ಚಿಕ್ಕಗರಸಂಗಿಯಲ್ಲಿ ತಾತ್ಕಾಲಿಕ ಶೆಡ್‌ಗಳಲ್ಲಿಯೇ ವಾಸವಾಗಿದ್ದಾರೆ.ಉತ್ತರ ಕರ್ನಾಟಕದ ಧಾರವಾಡ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾನುವಾರ ಸಾಧಾರಣ ಮಳೆಯಾಗಿದೆ.ಧಾರವಾಡ ಜಿಲ್ಲೆಯಲ್ಲಿ ಹುಬ್ಬಳ್ಳಿ- ಧಾರವಾಡ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ, ಹಾವೇರಿ ನಗರ, ಸುತ್ತಮುತ್ತ ತುಂತುರು ಮಳೆಯಾಗಿದೆ. ಉ.ಕ ಜಿಲ್ಲೆಯ ಮುಂಡಗೋಡ ಮತ್ತು ಯಲ್ಲಾಪುರದಲ್ಲಿ ಸಾಧಾರಣ ಮಳೆಯಾಗಿದೆ.

ಅಡಿಗೆ ತಲುಪಿತು.

917 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದಲ್ಲಿ 5.8 ಟಿಎಂಸಿ ಅಡಿಗಳಷ್ಟು ನೀರಿನ ಸಂಗ್ರಹ ಇದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.4 ದಿನಗಳ ಹಿಂದೆ ಜಲಾಶಯದ ನೀರಿನ ಮಟ್ಟ 63.9 ಅಡಿಗೆ ಕುಸಿದಿತ್ತು. 350 ಕ್ಯೂಸೆಕ್ ಇದ್ದ ಒಳಹರಿವಿನ ಪ್ರಮಾಣದಲ್ಲಿ ಇದೀಗ ಏರಿಕೆ ಕಾಣುತ್ತಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 72.32 ಅಡಿ ನೀರಿತ್ತು. 311 ಕ್ಯೂಸೆಕ್ ಒಳಹರಿವು ಹಾಗೂ 204 ಕ್ಯೂಸೆಕ್ ಹೊರ ಹರಿವು ದಾಖಲಾಗಿತ್ತು.

ಕಬಿನಿಗೆ 5ಅಡಿ ನೀರು: ಹೆಗ್ಗಡದೇವನಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ನೀರಿನ ಮಟ್ಟವು 24 ಗಂಟೆಗಳಲ್ಲಿ 5 ಅಡಿ ಏರಿಕೆಯಾಗಿದೆ. ಜಲಾಶಯಕ್ಕೆ ಸುಮಾರು 11 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕುಡಿಯುವ ನೀರಿಗಾಗಿ ಜಲಾಶಯದಿಂದ 100 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ.ಹೇಮಾವತಿ: ಸಕಲೇಶಪುರ ಸೇರಿದಂತೆ ಹಾಸನ ಜಿಲ್ಲೆಯ ವಿವಿಧೆಡೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು ಹೇಮಾವತಿ ಜಲಾಶಯದ ಒಳಹರಿವು ಹೆಚ್ಚಾಗಿದೆ.  ಕಳೆದ 24 ಗಂಟೆಗಳ ಅವಧಿಯಲ್ಲಿ ಜಲಾಶಯದ ನೀರಿನಮಟ್ಟ ಎರಡು ಅಡಿ ಏರಿಕೆಯಾಗಿದೆ. ಭಾನುವಾರ ಒಳಹರಿವು 4,917 ಕ್ಯೂಸೆಕ್ ಹಾಗೂ ನೀರಿನ ಮಟ್ಟ 2,861. 40 ಅಡಿಗೆ ಏರಿತ್ತು.ಆದರೆ, ಬೇಲೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗದೆ ಇರುವುದರಿಂದ ಯಗಚಿ ಜಲಾಶಯಕ್ಕೆ ನೀರು ಬಂದಿಲ್ಲ. ಜೂನ್ 16ರಂದು ಜಲಾಶಯದ ನೀರಿನಮಟ್ಟ 958.06 ಅಡಿ ಇದ್ದು, ಒಳಹರಿವು ಕೇವಲ 20 ಕ್ಯೂಸೆಕ್ ಇತ್ತು.ಲಿಂಗನಮಕ್ಕಿ: ಲಿಂಗನಮಕ್ಕಿ ಜಲಾಶಯಕ್ಕೂ ಒಳ ಹೆರಿವು ಹೆಚ್ಚಿದೆ. 13966 ಕ್ಯೂಸೆಕ್ ನೀರು ಹರಿದು ಬರುತ್ತಿದೆ. 1819 ಗರಿಷ್ಠ ಮಟ್ಟದ ಈ ಜಲಾಶಯದಲ್ಲಿ 1757.30 ಅಡಿ ನೀರು ಸಂಗ್ರಹವಾಗಿದೆ. ತುಂಗಭದ್ರಾ ಹಾಗೂ ಭದ್ರಾ ಜಲಾಶಯಗಳಿಗೆ ಒಳ ಹರಿವು ಕಡಿಮೆಯಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.