ಜಲ ಜಾಗೃತಿ ಮೂಡಿಸಲು ಜಾಥಾ
ಮಂಡ್ಯ: ವಿಶ್ವ ಜಲ ದಿನ ಅಂಗವಾಗಿ ನಗರದಲ್ಲಿ ಮಂಗಳವಾರ ನೀರಿನ ಉಳಿತಾಯ, ಮಿತ ಬಳಕೆ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕ್ರಮವಾಗಿ ಜಾಥಾ ಕಾರ್ಯಕ್ರಮ ನಡೆಯಿತು. ಹೆದ್ದಾರಿಯಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಪ್ರತಿಮೆಯ ಬಳಿಕ ಜಾಥಾಗೆ ಜಿಲ್ಲಾಧಿಕಾರಿ ಡಾ. ಪಿ.ಸಿ.ಜಾಫರ್ ಚಾಲನೆ ನೀಡಿದರು.
ವಿವಿಧ ಕಾಲೇಜುಗಳ ವಿದ್ಯಾರ್ಥಿ ಗಳು ಭಾಗವಹಿಸಿದ್ದು ನೀರಿನ ಮಿತ ಬಳಕೆ ಕುರಿತು ಜಾಗೃತಿ ಮೂಡಿಸುವ ಭಿತ್ತಿಪತ್ರಗಳನ್ನು ಅವರು ಹಿಡಿದಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಭೂಮಿಯ ಮೇಲೆ ಕುಡಿಯುವ ಉದ್ದೇಶಕ್ಕೆ ಲಭ್ಯವಿರುವ ನೀರಿನ ಪ್ರಮಾಣ ಕಡಿಮೆ. ಈ ಹಿನ್ನೆಲೆಯಲ್ಲಿ ಆದಷ್ಟು ಅಗತ್ಯವನ್ನು ಆಧರಿಸಿ ಮಾತ್ರವೇ ನೀರು ಬಳಸಬೇಕು ಎಂದರು. ನಗರಸಭೆ ಅಧ್ಯಕ್ಷ ಎಂ.ಪಿ. ಅರುಣ್ಕುಮಾರ್, ಪರಿಸರ ವಿಜ್ಞಾನ ವೇದಿಕೆಯ ಡಾ. ಜಿ.ಪಿ.ಶಿವಶಂಕರ್, ಮಹೇಂದ್ರ ಹಾಗೂ ನಗರಸಭೆಯ ವಿವಿಧ ಸದಸ್ಯರು ಹಾಜರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.