ಸೋಮವಾರ, ಮೇ 17, 2021
25 °C

ಜಲ ಮರುಪೂರಣ ಪ್ರಾತ್ಯಕ್ಷಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶನಿವಾರಸಂತೆ: ಇಲ್ಲಿಗೆ ಸಮೀಪದ ಹೊಸೂರು ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸುಜಯ್ ಕುಮಾರ್ ಕೌಕೋಡಿ ಅವರ ಮನೆಯಲ್ಲಿ ಕೊಳವೆ ಬಾವಿಗೆ ಜಲ ಮರು ಪೂರಣ ಪ್ರಾತ್ಯಕ್ಷಿಕೆ ಮತ್ತು ತರಬೇತಿ ಕಾರ್ಯಕ್ರಮ ನಡೆಯಿತು. ರೈತ ಮಿತ್ರ ಸಂಘಟನೆ ಅಧ್ಯಕ್ಷ ಗೋವಿಂದ್ ಕಾರ್ಯಕ್ರಮ ಉದ್ಘಾಟಿಸಿದರು.ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಕೃಷಿ ಅಧಿಕಾರಿ ಡಿ.ಯೋಗೀಶ್ ಮಾತನಾಡಿ, ಜಲಾನಯನ ಕಾರ್ಯಕ್ರಮದ ಉದ್ದೇಶ, ನೀರು ಇಂಗಿಸುವ ವಿಧಾನಗಳು ಹಾಗೂ ಅದರಿಂದ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು.ಒಕ್ಕೂಟದ ಉಪಾಧ್ಯಕ್ಷೆ ಗೀತಾ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯರಾದ ಹರೀಶ್, ಪುಟ್ಟಸ್ವಾಮಿ ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ಚಿಣ್ಣಪ್ಪಶೆಟ್ಟಿ ಉಪಸ್ಥಿತರಿದ್ದರು.ಸಂಜಯ್ ಸ್ವಾಗತಿಸಿದರು. ಹೊಸೂರು ವಿಭಾಗದ ಸೇವಾನಿರತೆ ರೇಣುಕಾ ನಿರೂಪಿಸಿ, ವಂದಿಸಿದರು.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.