ಜಾಕ್‌ವೆಲ್‌ಗೆ ಮುತ್ತಿಗೆ; ಪ್ರತಿಭಟ

7

ಜಾಕ್‌ವೆಲ್‌ಗೆ ಮುತ್ತಿಗೆ; ಪ್ರತಿಭಟ

Published:
Updated:

ಬೇಲೂರು: ಯಗಚಿ ಜಲಾಶಯದಿಂದ ತಮಿಳು ನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಚಿಕ್ಕಮ ಗಳೂರು ಜಿಲ್ಲೆಯ ಜನಪ್ರತಿನಿಧಿಗಳು ಬೇಲೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿ ಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ವಿವಿಧ ಸಂಘಟ ನೆಗಳ ಕಾರ್ಯಕರ್ತರು ಜಾಕ್‌ವೆಲ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರಲ್ಲದೆ, ಚಿಕ್ಕಮಗಳೂರು ನಗರಕ್ಕೆ ಕುಡಿಯುವ ನೀರು ಸರಬರಾಜನ್ನು ಸ್ಥಗಿತಗೊಳಿಸಿದ ಘಟನೆ ನಡೆಯಿತು.ಜಾಕ್‌ವೆಲ್‌ಗೆ ದಿಢೀರ್ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಚಿಕ್ಕಮಗಳೂರು ನಗರ ಹಾಗೂ ಅರಸೀಕೆರೆ ಪಟ್ಟಣಕ್ಕೆ ನೀರು ಸರಬರಾಜನ್ನು ಸ್ಥಗಿತ ಗೊಳಿಸುವಂತೆ ಪಟ್ಟು ಹಿಡಿದರು. ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಅಧಿಕಾರಿಗಳು ಈ ಎರಡು ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜನ್ನು ಸ್ಥಗಿತಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾ ನಿರತರು ಅಣೆಕಟ್ಟೆಯಲ್ಲಿ ಇರುವ 2ಟಿ.ಎಂ.ಸಿ. ನೀರಿನ ಪೈಕಿ ಈಗಾಗಲೇ ತಮಿಳುನಾಡಿಗೆ ಒಂದು ಟಿ.ಎಂ.ಸಿ. ನೀರು ಬಿಡುಗಡೆ ಮಾಡಲು ಸರ್ಕಾರ ಆದೇಶ ನೀಡಿದೆ. ಉಳಿದ 1 ಟಿ.ಎಂ.ಸಿ. ನೀರಿನಲ್ಲಿ ಬೇಲೂರು, ಚಿಕ್ಕಮಗಳೂರು, ಅರಸೀಕೆರೆ ಪಟ್ಟಣಗಳಿಗೆ ಕುಡಿಯುವ ನೀರು ಒದಗಿಸ ಬೇಕಾಗಿದೆ. ಜೊತೆಗೆ ರೈತರ ಬೆಳೆಗೆ ನೀರು ಹರಿಸಲು ಸಾಧ್ಯವಿಲ್ಲ. ಇಷ್ಟಿದ್ದರೂ ಚಿಕ್ಕಮಗಳೂರನ್ನು ಪ್ರತಿನಿಧಿಸುವ ಸಚಿವ ಸಿ.ಟಿ.ರವಿ ಹಾಗೂ ನಗರಸಭೆಯ ಸದಸ್ಯರು ಯಾವುದೇ ರೀತಿಯ ಪ್ರತಿಭಟನೆಗೂ ಮುಂದಾಗುತ್ತಿಲ್ಲ. ಸಿ.ಟಿ.ರವಿ ಸರ್ಕಾರದ ಮೇಲೆ ಒತ್ತಡ ಹೇರಿ ನೀರು ಬಿಡುಗಡೆ ಮಾಡುವುದನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.ಈ ಕುರಿತು `ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಸಚಿವ ಸಿ.ಟಿ.ರವಿ ಚಿಕ್ಕಮಗಳೂರಿನಲ್ಲೂ ಕಾವೇರಿ ವಿಚಾರವಾಗಿ ಪ್ರತಿಭಟನೆ ನಡೆಯುತ್ತಿದೆ. ಯಗಚಿಯಿಂದ ನೀರು ಹರಿಸುವುದನ್ನು ಸ್ಥಗಿತಗೊಳಿಸುವ ಸಂಬಂಧ ಮಾತುಕತೆ ನಡೆಸಲಾಗುವುದು. ಭಾನುವಾರ ನಗರಸಭೆ ಅಧ್ಯಕ್ಷರು ಮತ್ತು ಸದಸ್ಯರು ಬೇಲೂರಿನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry