ಭಾನುವಾರ, ಮೇ 9, 2021
26 °C

ಜಾಗತಿಕ ತಾಪಮಾನ ಹೆಚ್ಚಳ: ಐಇಎ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ಯಾರಿಸ್ (ಎಎಫ್‌ಪಿ): ಹೆಚ್ಚುತ್ತಿರುವ ಜಾಗತಿಕ ತಾಪಮಾನದ ಬಗ್ಗೆ ಎಚ್ಚರಿಕೆಯ ಗಂಟೆ ಮೊಳಗಿಸಿರುವ ಅಂತರರಾಷ್ಟ್ರೀಯ ಇಂಧನ ಸಂಸ್ಥೆ (ಐಇಎ), ತಾಪಮಾನ ಏರಿಕೆಯನ್ನು ತಗ್ಗಿಸಲು ತುರ್ತಾಗಿ ಕ್ರಮ ಕೈಗೊಳ್ಳಬೇಕು. ಆರ್ಥಿಕ ಅಭಿವೃದ್ಧಿಗೆ ಧಕ್ಕೆಯಾಗದಂತೆ ಹವಾಮಾನ ವೈಪರೀತ್ಯ ನಿಯಂತ್ರಣಕ್ಕೆ ನೀತಿ ರೂಪಿಸುವ ಅಗತ್ಯ ಎಂದಿದೆ.`ತಾಪಮಾನ ಏರಿಕೆಯ ಪ್ರಮಾಣವು 3.6ರಿಂದ 5.3 ಡಿಗ್ರಿ ಸೆಲ್ಸಿಯಸ್‌ಗೆ ತಲುಪಬಹುದೆಂದು ಅಂದಾಜಿಸಲಾಗಿದೆ. ಈ ಶತಮಾನದಲ್ಲಿ ಜಾಗತಿಕ ತಾಪಮಾನದ ಹೆಚ್ಚಳ ಪ್ರಮಾಣವನ್ನು 2 ಡಿಗ್ರಿ ಸೆಲ್ಸಿಯಸ್‌ಗೆ ಮಿತಿಗೊಳಿಸುವ ಅಗತ್ಯವಿದೆ.' ಎಂದು `ಐಇಎ' ಮುಖ್ಯಸ್ಥ ಮರಿಯಾ ವ್ಯಾನ್ ಡೆರ್ ಹೊಇವೆನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.