ಜಾಗತಿಕ ಮಟ್ಟದಲ್ಲಿ ಮುಂಬೈ ವಿಮಾನ ನಿಲ್ದಾಣಕ್ಕೆ ಮೂರನೇ ಸ್ಥಾನ

7

ಜಾಗತಿಕ ಮಟ್ಟದಲ್ಲಿ ಮುಂಬೈ ವಿಮಾನ ನಿಲ್ದಾಣಕ್ಕೆ ಮೂರನೇ ಸ್ಥಾನ

Published:
Updated:

 

 

ಮುಂಬೈ (ಐಎಎನ್ಎಸ್): ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮಿತಿ (ಎಸಿಐ) ವಿಶ್ವವ್ಯಾಪಿ ನಡೆಸಿದ ಸಮೀಕ್ಷೆಯಲ್ಲಿ ಮುಂಬೈನ ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತನ್ನ ಸೇವಾ ಗುಣಮಟ್ಟಕ್ಕಾಗಿ ಮೊದಲ ಮೂರನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮೊದಲ ಹಾಗೂ ಜಾಗತಿಕ ಮಟ್ಟದಲ್ಲಿ ಎರಡನೇ ಸ್ಥಾನದಲ್ಲಿದೆ. ಇದೀಗ ಭಾರತದಿಂದ ಎರಡನೇ ಹೆಸರಾಗಿ ಮುಂಬೈ ವಿಮಾನ ನಿಲ್ದಾಣಕ್ಕೆ ಜಾಗತಿಕ ಮಟ್ಟದಲ್ಲಿ ಮೂರನೇ ಸ್ಥಾನ ಹಾಗೂ ಭಾರತದಲ್ಲಿ ಎರಡನೇ ಸ್ಥಾನ ಲಭಿಸಿದೆ. ವಾರ್ಷಿಕ 2.5ರಿಂದ 4 ಕೋಟಿ ಪ್ರಯಾಣಿಕರು ಈ ವಿಮಾನ ನಿಲ್ದಾಣದಿಂದ ಪ್ರಯಾಣಿಸುತ್ತಾರೆ.

ಜಾಗತಿಕ ಮಟ್ಟದ 180 ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಈ ಸಮೀಕ್ಷೆಗೆ ಒಳಪಡಿಸಲಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry