ಸೋಮವಾರ, ಜೂನ್ 14, 2021
21 °C

ಜಾಗತೀಕರಣದ ಸವಾಲು ಎದುರಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ: ನಿತ್ಯ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚುತ್ತಿದ್ದು, ಪರಿಸರ ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ರಾಜ್ಯ  ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಸಿದ್ದರಾಮಯ್ಯ ಹೇಳಿದರು.

ಇಲ್ಲಿನ ಪುರಭವನದಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪುರಸಭೆ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ `ಪೌರ ಘನತ್ಯಾಜ್ಯ ನಿರ್ವಹಣೆ ಹಾಗೂ ಪ್ಲಾಸ್ಟಿಕ್ ನಿಯಂತ್ರಣ ನಿಯಮ~ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ  ಮಾತನಾಡಿದರು.

ಪ್ಲಾಸ್ಟಿಕ್‌ನಿಂದ ಭೂ, ಜಲ, ವಾಯು ಮಾಲಿನ್ಯ ಉಂಟಾಗುತ್ತಿದೆ. ಚರಂಡಿಯಲ್ಲಿ ಸೇರಿ ನೀರು ಸರಾಗವಾಗಿ ಹರಿಯಲು ತೊಡಕಾಗುತ್ತಿದೆ.

ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿಹಾಕಿದ ಕಸವನ್ನು ಆಹಾರವೆಂದು ತಿನ್ನುವ ಜಾನುವಾರುಗಳು ಸಾಯುತ್ತಿವೆ.  ನೀರು ಮತ್ತು  ಮಣ್ಣಿಗೆ ಸೇರಿದ ಪ್ಲಾಸ್ಟಿಕ್‌ನಿಂದ ಜೀವಿಗಳ ಮೇಲೆ ದುಷ್ಪರಿಣಾಮ ತಲೆದೋರುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಪ್ಲಾಸ್ಟಿಕ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಮಾಲಿನ್ಯ ನಿಯಂತ್ರಣಾ ಮಂಡಳಿಯು ಕಾಯ್ದೆಯನ್ನು ಜಾರಿಗೆ ತಂದಿದೆ.  ತ್ಯಾಜ್ಯವನ್ನು ಸೂಕ್ತ ಸಂಗ್ರಹಣೆ, ವಿಂಗಡಣೆ ,ಮತ್ತು ವಿಲೇವಾರಿ ಬಗ್ಗೆ ಪುರಸಭೆ ಮತ್ತು ನಗರಸಭೆ ಕ್ರಮ ಕೈಗೊಳ್ಳಬೇಕು. ಜನರಿಗೆ ಪ್ಲಾಸ್ಟಿಕ್ ಅನಾಹುತಗಳ ಬಗ್ಗೆ ಸ್ಪಷ್ಟವಾಗಿ ಮನವರಿಕೆ ಮಾಡಿಕೊಡಬೇಕು ಎಂದರು.

ಪರಿಸರ ಮಾಲಿನ್ಯ ಮಂಡಳಿ ಉಪ ಅಧಿಕಾರಿ ಶಾಣಯ್ಯ, ಖಾಸಗಿ ವೈದ್ಯಕೀಯ ಕೇಂದ್ರಗಳ ಘನತ್ಯಾಜ್ಯಗಳನ್ನು ಮೂರು ವಿಭಾಗಗಳಲ್ಲಿ ಪ್ರತ್ಯೇಕಿಸಿ ನಿರ್ವಹಣೆ ಮಾಡಬೇಕಾಗಿದೆ. ಆಸ್ಪತ್ರೆ ತ್ಯಾಜ್ಯಗಳು ವಿಷಯುಕ್ತ ಎಂಬುದನ್ನು ವೈದ್ಯರು ಅರ್ಥಮಾಡಿಕೊಳ್ಳಬೇಕು.  ಘನತ್ಯಾಜ್ಯ ನಿರ್ವಹಣೆ ಬಗ್ಗೆ ಪೌರ ಕಾರ್ಮಿಕರಿಗೆ ಸಾಕ್ಷ್ಯ ಚಿತ್ರದ ಮೂಲಕ ಮಾಹಿತಿ ಮತ್ತು ಸಲಹೆ ನೀಡಬೇಕು ಎಂದು ಅವರು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ಸುಮಾ, ಡಾ.ಸತ್ಯಪ್ರಕಾಶ್, ಡಾ.ನಟರಾಜ್ ಇತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.