ಭಾನುವಾರ, ಮೇ 16, 2021
22 °C

ಜಾಗೃತಿ ಅಭಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಶ್ವ ಪರಿಸರ ದಿನದ ಅಂಗವಾಗಿ ದಿ ಲಲಿತ್ ಅಶೋಕ್ ಹೋಟೆಲ್,  ಬಿಒಎಸ್‌ಸಿಒ ಸಹಯೋಗದೊಂದಿಗೆ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.`ಸ್ವಚ್ಛತೆ ಕಾಪಾಡಿ, ಆಹಾರ ಉಳಿಸಿ' ಎಂಬ ಘೋಷಣೆಯೊಂದಿಗೆ ಜನರಲ್ಲಿ ಪರಿಸರ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ  ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.`ವಿಶ್ವಸಂಸ್ಥೆಯ ಆಹಾರ ಹಾಗೂ ಕೃಷಿ ಸಂಸ್ಥೆಯ ಪ್ರಕಾರ ಪ್ರತಿವರ್ಷ ವಿಶ್ವದಲ್ಲಿ 130 ಕೋಟಿ ಟನ್ ಆಹಾರ ಹಾಳಾಗುತ್ತಿದೆ. ಇನ್ನು ಮುಂದಾದರೂ ಆಹಾರ ಮುಂತಾದ ಅಗತ್ಯ ವಸ್ತುಗಳನ್ನು ಮಿತವಾಗಿ ಬಳಸಿಕೊಳ್ಳಬೇಕು ಎಂಬ ಜಾಗೃತಿ ನಾಗರಿಕರಲ್ಲಿ ಮೂಡಬೇಕು' ಎಂದು ಲಲಿತ್ ಅಶೋಕ್‌ನ ಪ್ರಧಾನ ವ್ಯವಸ್ಥಾಪಕ ಅಮಿತ್ ಸ್ಯಾಮ್‌ಸನ್' ಅಭಿಪ್ರಾಯಪಟ್ಟರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.