ಸೋಮವಾರ, ಮೇ 17, 2021
28 °C

ಜಾತಿ ಆಧರಿಸಿ ಸಿಎಂ ಬೇಡಿಕೆ ಸಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅರಸೀಕೆರೆ; ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಪಟ್ಟ ಪಡೆಯುವುದು ಅಸಾಧ್ಯ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷರೂ ಆದ ಎಚ್.ಡಿ. ದೇವೇಗೌಡ ಅಭಿಪ್ರಾಯಪಟ್ಟರು.ಭಾನುವಾರ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಮಾಧ್ಯಮಿಕ ಶಾಲಾ ಆವರಣದಲ್ಲಿ ಪುರಸಭಾ ಆಡಳಿತ ವ್ಯವಸ್ಥೆಗೊಳಿಸಿದ್ದ ಹೇಮಾವತಿ ನದಿ ಮೂಲ ದಿಂದ 121.85 ಕೋಟಿ ರೂಪಾಯಿ ವೆಚ್ಚದ ಕುಡಿಯುವ ನೀರು ಯೋಜನೆ ಹಾಗೂ 64.15ಕೋಟಿ ರೂ ವೆಚ್ಚದ ಒಳ ಚರಂಡಿ ಯೋಜನೆಯ ಕಾಮಗಾರಿ ಶಂಕುಸ್ಥಾಪನಾ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಬಿಜೆಪಿಯಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹಾಗೂ ಮಾಜಿ ಮಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ಅವರ ನಡುವಿನ ಜಾತಿ ಸಂಘರ್ಷದ ಬಗ್ಗೆ ಹೆಸರನ್ನು ಹೇಳದೇ ಪರೋಕ್ಷವಾಗಿ ಟೀಕಿಸಿದ ಗೌಡರು, ಜಾತಿ ಆಧಾರದಲ್ಲಿ ಮುಖ್ಯಮಂತ್ರಿ ಪಟ್ಟ ಪಡೆಯುವುದು ಅಸಾಧ್ಯ. ಜನಪರ ಕೆಲಸಗಳನ್ನು ಮಾಡಿದರೆ ಮಾತ್ರ ಆ ಪಟ್ಟ ಪಡೆಯಲು ಸಾಧ್ಯ ಎಂದು ಹೇಳಿದರು.ಅಲ್ಪ ಸಂಖ್ಯಾತ ವರ್ಗಕ್ಕೆ ಸೇರಿದ ರಾಮಕೃಷ್ಣ ಹೆಗ್ಡೆ ಅವರಂಥವರು ಕೇವಲ ಜಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಪಟ್ಟ ಅಲಂಕರಿಸಿರಲಿಲ್ಲ. ಅವರುಗಳ ಜನಪ್ರಿಯತೆಯೇ ಅವರಿಗೆ ಮುಖ್ಯ ಮಂತ್ರಿಯಂತಹ ಪಟ್ಟ ತಂದುಕೊಟ್ಟಿತು. ಮುಖ್ಯಮಂತ್ರಿ ಆದವರು ಅಧಿಕಾರಿ ಗಳನ್ನು ಹತೋಟಿಯಲ್ಲಿ ಇಟ್ಟುಕೊಳ್ಳ ದಿದ್ದರೆ ಆಡಳಿತ ನಡೆಸುವುದು ಕಷ್ಟ. ಮುಖ್ಯಮಂತ್ರಿ ಆದವರಿಗೆ ಧೈರ್ಯ ಇರಬೇಕು ಎಂದು ಅವರು ತಿಳಿಸಿದರು.ಸಚಿವ ವಿ. ಸೋಮಣ್ಣ ಮಾತನಾಡಿ, ಪಟ್ಟಣಕ್ಕೆ ಹೇಮಾವತಿ ನದಿ ಮೂಲದಿಂದ ಕುಡಿಯುವ ನೀರು ಒದಗಿಸುವ ಯೋಜನೆಯನ್ನು ನಿಗದಿತ ಸಮಯದಲ್ಲಿಯೇ ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಜಿಲ್ಲೆಯ ಅರಸೀಕೆರೆ ಸೇರಿದಂತೆ ಐದು ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಜನರಿಗೆ ಕುಡಿಯುವ ನೀರು ಜಾನುವಾರುಗಳಿಗೆ ನೀರಿನ ಜತೆಗೆ ಮೇವು ಆದ್ಯತೆ ಮೇಲೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ಹೇಳಿದರು.ಮಾಜಿ ಸಚಿವ ಎಚ್.ಡಿ. ರೇವಣ್ಣ ಮಾತನಾಡಿ, ಜಿಲ್ಲೆಯಲ್ಲಿ ಆಲೂಗಡ್ಡೆ ಬೆಳೆಗಾರರು ಸಂಕಷ್ಟ ಎದುರಿ ಸುತ್ತಿದ್ದಾರೆ. ಶುಂಠಿ ಮತ್ತು ಅರಿಶಿಣದ ಬೆಲೆಗಳು ಕುಸಿದಿದೆ. ಇಂತಹ ಸಂದರ್ಭ ದಲ್ಲಿ ಸರ್ಕಾರ ಶೇಕಡ 50ರ ರಿಯಾ ಯತಿ ದರದಲ್ಲಿ ರೈತರಿಗೆ ಆಲೂಗಡ್ಡೆ ಬಿತ್ತನೆ ಬೀಜ, ರಸ ಗೊಬ್ಬರ ಹಾಗೂ ಶುಂಠಿ ಅರಿಶಿಣ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸಿದರು.ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ ದರು. ರಾಜ್ಯ ಜಲ ಮಂಡಳಿ ವ್ಯವ ಸ್ಥಾಪಕ ನಿರ್ದೇಶಕ ಎಂ.ಸಿ. ಮುನಿಯಪ್ಪ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸುಲೋಚನಾ ರಾಮಕೃಷ್ಣ, ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್, ಜಿ.ಪಂ. ಕಾರ್ಯನಿರ್ವಹಕಾಧಿಕಾರಿ ಎಸ್.ಟಿ ಅಂಜನ್‌ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್‌ಸಿಂಗ್ ಇತರರು ಉಪಸ್ಥಿತರಿದ್ದರು.  

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.