ಜಾತಿ ಜನಗಣತಿಗೆ ಕಾಂಗ್ರೆಸ್ ಒತ್ತಾಯ

7

ಜಾತಿ ಜನಗಣತಿಗೆ ಕಾಂಗ್ರೆಸ್ ಒತ್ತಾಯ

Published:
Updated:
ಜಾತಿ ಜನಗಣತಿಗೆ ಕಾಂಗ್ರೆಸ್ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ಇತರೆ ಹಿಂದುಳಿದ ವರ್ಗಗಳ ಜನಸಂಖ್ಯೆ ಎಷ್ಟು ಎಂಬುದನ್ನು ತಿಳಿಯಲು ಸರ್ಕಾರ ಜಾತಿ ಜನಗಣತಿಯನ್ನು ತಕ್ಷಣ ಕೈಗೆತ್ತಿಕೊಳ್ಳಬೇಕು ಎಂದು ಕೆಪಿಸಿಸಿಯ ಇತರೆ ಹಿಂದುಳಿದ ವರ್ಗಗಳ ಘಟಕ ಒತ್ತಾಯಿಸಿದೆ.ಈ ಗಣತಿಗೆ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಬಳಿ ಇರುವ 23.05 ಕೋಟಿ ರೂಪಾಯಿ ಹಣವನ್ನು ಬಳಸಿಕೊಳ್ಳಬೇಕು ಎಂದು ಘಟಕ ಒತ್ತಾಯಿಸಿದೆ.ಹೊಸದಾಗಿ ಚುನಾಯಿತರಾದ ಬ್ಲಾಕ್ ಮತ್ತು ಜಿಲ್ಲಾ ಅಧ್ಯಕ್ಷರಿಗೆ ಬೆಂಗಳೂರಿನಲ್ಲಿ ಸೋಮವಾರ ಆಯೋಜಿಸಿದ್ದ ಒಂದು ದಿನ ಕಾರ್ಯಾಗಾರದಲ್ಲಿ ಘಟಕ ಈ ಆಗ್ರಹ ಮಂಡಿಸಿದೆ.ಕಾರ್ಯಾಗಾರದಲ್ಲಿ ಮಾತನಾಡಿದ ಪಕ್ಷದ ಮುಖಂಡ ಸಿದ್ದರಾಮಯ್ಯ, `ಹಿಂದುಳಿದ ವರ್ಗಗಳ ಜನರಿಗೆ ಕಾಂಗ್ರೆಸ್‌ನಿಂದ ಮಾತ್ರ ನ್ಯಾಯ ದೊರೆಯಲು ಸಾಧ್ಯ. ಈ ವರ್ಗ ಬಿಜೆಪಿಯ ಹಿಂದೆ ಹೋದರೆ ಅಸ್ತಿತ್ವ ಕಳೆದುಕೊಳ್ಳಬೇಕಾಗುತ್ತದೆ. ಜೆಡಿಎಸ್‌ನಿಂದಲೂ ಈ ವರ್ಗಕ್ಕೆ ನ್ಯಾಯ ಸಿಗುವುದಿಲ್ಲ~ ಎಂದು ಎಚ್ಚರಿಸಿದರು.ಕಾರ್ಯಾಗಾರದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂ, `ಬಿಜೆಪಿ ಮುಖಂಡ ಬಿ.ಎಸ್. ಯಡಿಯೂರಪ್ಪ ಅವರ ಜೊತೆ ನಾನು ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ~ ಎಂದರು.ರೈಲ್ವೆ ಖಾತೆ ರಾಜ್ಯ ಸಚಿವ ಕೆ.ಎಚ್. ಮುನಿಯಪ್ಪ, ಮುಖಂಡರಾದ ಸಿ.ಕೆ. ಜಾಫರ್ ಷರೀಫ್, ವಿನಯ್ ಕುಮಾರ್ ಸೊರಕೆ, ಆರ್.ವಿ. ವೆಂಕಟೇಶ್, ಬಿ.ಎನ್. ವೇಣುಗೋಪಾಲ್ ಮತ್ತಿತರರು ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry