ಗುರುವಾರ , ಮೇ 13, 2021
16 °C

ಜಾತಿ, ಧರ್ಮ ಮೀರಿದ ವ್ಯಕ್ತಿತ್ವ-ಸಿ.ಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಬಸವಣ್ಣ ಕೇವಲ ಒಂದು ಜಾತಿ, ಧರ್ಮ, ಪಂಗಡಕ್ಕೆ ಸೇರಿದವರಲ್ಲ. ಅವರು ಇಡೀ ಜಗತ್ತಿಗೆ ಸೇರಿದವರು. ಅವರ ವಿಚಾರಧಾರೆಗಳನ್ನು ಎಲ್ಲರಿಗೂ ತಲುಪಿಸುವುದು ಸರ್ಕಾರದ ಕರ್ತವ್ಯವಾಗಿದೆ~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ರವೀಂದ್ರ ಕಲಾ ಕೇತ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

`ಬಸವಣ್ಣನವರ ಆದರ್ಶಗಳನ್ನು ಸಮಾಜದ ಎಲ್ಲಾ ವರ್ಗದ ಜನರಿಗೂ ತಲುಪಿಸುವ ದೃಷ್ಠಿಯಿಂದ ಅವರ ವಿಚಾರಗಳನ್ನು ಹಾಗೂ ನೆನಪುಗಳನ್ನು ಸಂಗ್ರಹಿಸುವುದು ಸರ್ಕಾರದ ಹೊಣೆಯಾಗಿದೆ~ ಎಂದು ನುಡಿದರು.

`ದಲಿತ ನಾಯಕನಾಗಿ, ಅಧ್ಯಾತ್ಮದ ಶಕ್ತಿಯಾಗಿ, ಮುಂದಿನ ಜನತೆಗೆ ದಾರಿ ದೀಪವಾಗಿರುವ ಬಸವಣ್ಣ ಅವರ ತತ್ವ ಹಾಗೂ ಆದರ್ಶಗಳನ್ನು ಅನುಸರಿಸುವುದು ನಮ್ಮ ಕರ್ತವ್ಯವಾಗಿದೆ~ ಎಂದು ಅವರು ಅಭಿಪ್ರಾಯಪಟ್ಟರು.

ಶಾಸಕ ಡಿ. ಹೇಮಚಂದ್ರ ಸಾಗರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರದಾನ ಕಾರ್ಯದರ್ಶಿ ಬಸವರಾಜು ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.