ಗುರುವಾರ , ಮೇ 6, 2021
23 °C
ಚಿತ್ರದುರ್ಗದಲ್ಲಿ ಸಚಿವ ಎಚ್.ಆಂಜನೇಯ ಸ್ಪಷ್ಟನೆ

`ಜಾತಿ ನಿಂದನೆ: ಹೇಳಿಕೆ ತಿರುಚಲಾಗಿದೆ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಪರಿಶಿಷ್ಟರಿಗೆ ಜಾತಿ ನಿಂದನೆ ಉಂಟಾದರೆ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಡಿ ಎಂಬುದಾಗಿ ನಾನು ಹೇಳಿಲ್ಲ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ಸ್ಪಷ್ಟಪಡಿಸಿದರು.



ನಗರದ ವಾರ್ತಾ ಇಲಾಖೆ ಭವನದಲ್ಲಿ ಭಾನುವಾರ ಅವರು ಮಾತನಾಡಿದರು.



`ದೌರ್ಜನ್ಯ ಪ್ರಕರಣ ದಾಖಲಿಸುವ ಮೊದಲು ನನ್ನ ಗಮನಕ್ಕೆ ತಂದು ನಂತರ ಪ್ರಕರಣ ದಾಖಲಿಸಿ ಎಂದು ಹೇಳಿದ್ದೆ. ನನ್ನ ಹೇಳಿಕೆಯನ್ನು ಬೇರೆಯವರು ಅರ್ಥೈಸಿಕೊಂಡಿಲ್ಲ. ಎಲ್ಲ ಜನಾಂಗದವರೊಂದಿಗೆ ದಲಿತರು ಸಹಬಾಳ್ವೆಯಿಂದ ಜೀವನ ನಡೆಸಿದಾಗ ಮಾತ್ರ ಸಮಾಜ ನೆಮ್ಮದಿಯಿಂದ ಇರಲು ಸಾಧ್ಯವಾಗುತ್ತದೆ' ಎಂದು ಸಚಿವರು ತಿಳಿಸಿದರು.



`ಸಮಾಜದಲ್ಲಿ ಸಾಮರಸ್ಯ ಮೂಡಿಸುವ ನಿಟ್ಟಿನಲ್ಲಿ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯಬಾರದು ಎನ್ನುವ ಉದ್ದೇಶದಿಂದ ಒಮ್ಮೆ ನನ್ನ ಗಮನಕ್ಕೆ ತನ್ನಿ ಎನ್ನುವುದಾಗಿ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚಿಸಿದ್ದೆ' ಎಂದು  ಅವರು ಸ್ಪಷ್ಟಪಡಿಸಿದರು.



ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸೇತೂರಾಂ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.