ಬಸವನಬಾಗೇವಾಡಿ: ಜಾತಿ ವ್ಯವಸ್ಥೆ ಯಿಂದ ಉತ್ತಮ ಸಮಾಜ ಕಟ್ಟಲು ಸಾಧ್ಯವಿಲ್ಲ. ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಿದಾಗ ಮಾತ್ರ ದೇಶಕ್ಕೆ ಉಜ್ವಲ ಭವಿಷ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.

ಪಟ್ಟಣದ ಬಸವ ಜನ್ಮಸ್ಮಾರಕದ ಮಾದರಸ ಸಭಾಭವನದಲ್ಲಿ ಬಸವಸಂಗಮ ಪ್ರತಿಷ್ಠಾನ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ `ಬಸವಭೂಷಣ~ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮತನಾಡಿದರು.

ಹನ್ನೆರಡನೇ ಶತಮಾನದಲ್ಲಿ ಶರಣರು ಸಾಮರಸ್ಯದಿಂದ ನಡೆಸಿದ ಜೀವನ ಎಲ್ಲರಿಗೂ ಮಾದರಿಯಾಗಿದೆ. ಅಂದು ಬಸವಣ್ಣನವರು ಅಂತರಜಾತಿ ವಿವಾಹ ಮಾಡುವುದರ ಮೂಲಕ ಸಮಾನತೆ ತರುವ ಪ್ರಯತ್ನ ಮಾಡಿದರು. ಅಂದಿನ ಶರಣರ ಜೀವನದ ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಸಾನಿಧ್ಯ ವಹಿಸಿದ್ದ ವಿಜಾಪುರದ ಜ್ಞಾನಯೋಗಾಶ್ರಮದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಮಾತನಾಡಿ ಪ್ರತಿಯೊಬ್ಬರು ಉದಾತ್ತ ಗುರಿ ಇಟ್ಟುಕೊಳ್ಳಬೇಕು. ಆ ಗುರಿಯನ್ನು ತಲುಪಲು ಶ್ರಮಿಸಬೇಕು. ತಾವು ಇಟ್ಟುಕೊಂಡ ಗುರಿ ಸಮಾಜಮುಖಿಯಾಗಬೇಕು ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಸಾಹಿತಿ ಡಾ.ಸತ್ಯಾನಂದ ಪಾತ್ರೋಟ ಮಾತನಾಡಿ, ಪ್ರಾದೇಶಿಕ ಅಸಮಾನತೆ ಯಾಗದಂತೆ ರಾಜ್ಯ ಸರಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು ಶ್ಲಾಘನೀಯ. ಪ್ರಶಸ್ತಿಗಳಿಗೆ ಜಾತಿ, ಧರ್ಮಗಳು ಅಡ್ಡಬರಲಾರವು. ಸಮಾಜ ಸೇವೆ ಮತ್ತು ವಿವಿಧ ಕ್ಷೇತ್ರಗಳ ಸಾಧನೆ ಗುರುತಿಸಿ ಪ್ರಶಸ್ತಿಗಳು ದೊರಕಬೇಕು ಎಂದು ಹೇಳಿದರು.

ವಕೀಲ ಬಿ.ಕೆ.ಕಲ್ಲೂರ ಹಾಗೂ ಬಸವಭೂಷಣ ಪ್ರಶಸ್ತಿ ಸ್ವಿಕರಿಸಿದ ಚಲನಚಿತ್ರನಟ ಬ್ಯಾಂಕ್ ಜನಾರ್ದನ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 20 ಸಾಧಕರಿಗೆ ಬಸವಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.ಪ್ರತಿಷ್ಠಾನದ ಅಧ್ಯಕ್ಷ ಮುರಗೇಶ ಸಂಗಮ ಸ್ವಾಗತಿಸಿದರು, ಶಿಕ್ಷಕ ಅಶೋಕ ಹಂಚಲಿ ನಿರೂಪಿಸಿದರು, ಮಹಾಂತೇಶ ಸಂಗಮ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.