ಜಾತ್ರಾ ಮಹೋತ್ಸವ ಇಂದಿನಿಂದ

ಭಾನುವಾರ, ಜೂಲೈ 21, 2019
25 °C

ಜಾತ್ರಾ ಮಹೋತ್ಸವ ಇಂದಿನಿಂದ

Published:
Updated:

ಬೆಳಗಾವಿ: ಖಾನಾಪುರ ತಾಲ್ಲೂಕಿನ ಅವರೊಳ್ಳಿ-ಬಿಳಕಿ ಗ್ರಾಮದೇವತೆಯರ ಜಾತ್ರಾ ಮಹೋತ್ಸವ ಇದೇ 20ರಿಂದ ಆರಂಭವಾಗಲಿದೆ.ಜಾತ್ರಾ ಮಹೋತ್ಸವಕ್ಕೆ ಸೋಮವಾರ ಸಂಜೆ 6 ಗಂಟೆಗೆ ಶಾಸಕ ಪ್ರಹ್ಲಾದ ರೇಮಾನಿ ಚಾಲನೆ ನೀಡಲಿದ್ದಾರೆ.

ಮಂಗಳವಾರ ರಾತ್ರಿ ಹಾಗೂ ಬುಧವಾರ ಸಂಜೆಯವರೆಗೆ ದೇವಿಯರು ಗ್ರಾಮದಲ್ಲಿ ಸಂಚರಿಸುವರು. ಸಂಜೆ 6 ಗಂಟೆಗೆ ದೇವಿಯರನ್ನು ಸೀಮೆಗೆ ಕಳುಹಿಸುವುದರೊಂದಿಗೆ ಜಾತ್ರೆ ಸಂಪನ್ನಗೊಳ್ಳುತ್ತದೆ.ಜೂನ್ 23ರಂದು ಗ್ರಾಮದ ಭುವನೇಶ್ವರಿ ಕನ್ನಡ ಬಳಗವು ಜಾತ್ರಾ ಮಹೋತ್ಸವ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಜೂನ್ 24ರಂದು ದೇವಿಯನ್ನು ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಪಿಸಿ ಉಡಿ ತುಂಬಲಾಗುತ್ತದೆ.ಜಾತ್ರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಜಾತ್ರಾ ಉತ್ಸವ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.ಇಲಾಖಾ ಪರೀಕ್ಷೆ ದಿನಾಂಕ ಪ್ರಕಟ

ಬೆಳಗಾವಿ: ಪ್ರಸಕ್ತ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳು ಜುಲೈ 4ರಿಂದ 15ರ ವರೆಗೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿವೆ.ಅರ್ಹ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ನಿಂದ ಪ್ರವೇಶಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಡೌನ್‌ಲೋಡ್ ಮಾಡಿಕೊಳ್ಳಲು ಸಮಸ್ಯೆಯಾದಲ್ಲಿ 080- 30574944/45 ದೂರವಾಣಿ ಮೂಲಕ ಸಂಪರ್ಕಿಸಬಹುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry