ಶುಕ್ರವಾರ, ಮೇ 7, 2021
27 °C

ಜಾಧವ್‌ಗೆ ಎನ್‌ಸಿಪಿ ಸಾರಥ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಐಎಎನ್‌ಎಸ್): ಕೇಂದ್ರ ಸಚಿವ ಶರದ್ ಪವಾರ್ ನೇತೃತ್ವದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ದ ರಾಜ್ಯ ಘಟಕದ ಹೊಸ ಅಧ್ಯಕ್ಷರಾಗಿ ಮಹಾರಾಷ್ಟ್ರದ ಮಾಜಿ ಸಚಿವ ಭಾಸ್ಕರ್ ಜಾಧವ್ ಆಯ್ಕೆಯಾಗಿದ್ದಾರೆ.ಈವರೆಗೂ ಪಕ್ಷದ ಅಧ್ಯಕ್ಷರಾಗಿದ್ದ ಮಧುಕರ್ ಪಿಚಡ್ ಇತ್ತೀಚೆಗೆ ಸಚಿವ ಸಂಪುಟ ಸೇರಿದ್ದರಿಂದ ಈ ಹುದ್ದೆ ತೆರವಾಗಿತ್ತು. ಫೆಬ್ರುವರಿಯಲ್ಲಿ ಪುತ್ರನ ವೈಭವೋಪೇತ ಮದುವೆ ಮೂಲಕ ವಿವಾದಕ್ಕೆ ಗುರಿಯಾಗಿದ್ದ ಜಾಧವ್ ಇತ್ತೀಚೆಗೆ ನಡೆದ ಸಂಪುಟ ಪುನರ್ ರಚನೆಯಲ್ಲಿ ಸಚಿವ ಸ್ಥಾನ ಕಳೆದುಕೊಂಡಿದ್ದರು. ಕೊಂಕಣ ಭಾಗದ ಪ್ರಭಾವಿ ನಾಯಕರಾಗಿರುವ ಜಾಧವ್ ಅವರಿಗೆ ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಸಾರಥ್ಯವನ್ನು ವಹಿಸಲಾಗಿದೆ ಎನ್ನಲಾಗಿದೆ. 56 ವರ್ಷದ ಜಾಧವ್ 2005ರಲ್ಲಿ ಶಿವಸೇನಾ ತೊರೆದು ಎನ್‌ಸಿಪಿ ಸೇರಿದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.