ಜಾನಪದ ಕನ್ನಡ ಸುಗ್ಗಿ ಹಬ್ಬ

ದೊಡ್ಡಬಳ್ಳಾಪುರ: ನಗರದ ಮಾರುತಿ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ವತಿಯಿಂದ ತಾಲ್ಲೂಕು ಮಟ್ಟದ ನೂತನ ಕಚೇರಿ ಹಾಗೂ ಜಾನಪದ ಕನ್ನಡ ಸುಗ್ಗಿ ಹಬ್ಬ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಟಿ.ವೆಂಕಟರಮಣಯ್ಯ, ನಾಡು ನುಡಿ ಏಳಿಗೆಗಾಗಿ ಶ್ರಮಿಸಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ರಾಜ್ಯದ ಹಿತಕ್ಕೆ ದಕ್ಕೆ ಬಂದಾಗ ಹೋರಾಟ ನಡೆಸಿ ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕಿದೆ ಎಂದರು.
ಕರವೇ ರಾಜ್ಯ ಅಧ್ಯಕ್ಷ ಎಚ್.ಶಿವರಾಮೇಗೌಡ ಮಾತನಾಡಿ, ಕರ್ನಾಟಕ ರಕ್ಷಣಾ ವೇದಿಕೆ ನಾಡು ನುಡಿ ಏಳಿಗೆಗಷ್ಟೇ ಅಲ್ಲದೇ ಕನ್ನಡಿಗರ ಬದುಕಿನ ಸಮಸ್ಯೆ ಬಂದಾಗ ಕೂಡ ದನಿ ಎತ್ತಬೇಕು ಎಂದರು. ಕಾರ್ಯಕ್ರಮದ ಅಂಗವಾಗಿ ಜಾನಪದ ಕಲಾ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಕಾರ್ಯಕ್ರಮದಲ್ಲಿ ಚಿತ್ರನಟ ಹರ್ಷ, ಕಾಂಗ್ರೆಸ್ ಮುಖಂಡ ಬಿ.ಸಿ. ಆನಂದ್ ಕುಮಾರ್, ಕರವೇ ತಾಲ್ಲೂಕು ಅಧ್ಯಕ್ಷ ಮರುಳಾರಾಧ್ಯ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಖಜಾಂಚಿ ಮಂಜುನಾಥ್, ನಗರ ಘಟಕದ ಅಧ್ಯಕ್ಷ ಮೋಹನ್ ಕುಮಾರ್, ಕಲಾವಿದರ ಸಂಘದ ಅಧ್ಯಕ್ಷ ಜಿ.ನಾಗರಾಜ್ ಮತ್ತಿತರರು ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.