ಶನಿವಾರ, ಜುಲೈ 24, 2021
22 °C

ಜಾನಪದ ಸಂಸ್ಕೃತಿ ಉಳಿಸಿ ಬೆಳೆಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಾವಗಲ್: ಜೀವನ ಸಂಸ್ಕೃತಿಯ ಮೂಲ ಬೇರು ಜಾನಪದ. ಮಕ್ಕಳಲ್ಲಿ ಜಾನಪದ ಕಲೆಗಳ ಅರಿವು ಮೂಡಿಸಿ ಇಂತಹ ಕಲೆಗಳನ್ನು ಉಳಿಸುವ ಕೆಲಸ ಆಗಬೇಕಿದೆ ಎಂದು ಜಿಪಂ ಸದಸ್ಯ ಇ.ಎಚ್. ಲಕ್ಷ್ಮಣ ತಿಳಿಸಿದರು.ಪಟ್ಟಣದಲ್ಲಿ ಭಾನುವಾರ ತಾಲ್ಲೂಕು ಜಾನಪದ ಪರಿಷತ್, ಬನಶಂಕರಿ ಮಹಿಳಾ ಸಾಂಸ್ಕೃತಿಕ ಮತ್ತು ಸಮಾಜ ಸೇವಾ ಸಮಿತಿ ಹಾಗೂ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ನಡೆದ ಜಾನಪದ ಮತ್ತು ಸಾಂಸ್ಕೃತಿಕ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.ಗ್ರಾಮಾಂತರ ಪ್ರದೇಶದಲ್ಲಿ ಜಾನಪದ ಕಲೆಗಳು ನಶಿಸುತ್ತಿವೆ. ಇದನ್ನು ಉಳಿಸಿ ಬೆಳೆಸಬೇಕಾಗಿದ್ದು, ಪ್ರತಿಯೊಬ್ಬರ ಕರ್ತವ್ಯ. ಮಹಿಳಾ ಸಂಘಟನೆಗಳು ಇಂತಹ ಶಿಬಿರಗಳನ್ನು ಹೆಚ್ಚಾಗಿ ನಡೆಸುವಂತೆ ಕರೆ ನೀಡಿದರು.ಮನುಗುಂಡಿಯ ಬಸವಾನಂದ ಸ್ವಾಮೀಜಿ ಮಾತನಾಡಿ, ಜಾನಪದ ಕಲೆಗಳನ್ನು ತಾತ್ಸಾರದಿಂದ ನೋಡದೆ ಪೂಜ್ಯ ಭಾವನೆಯಿಂದ ನೋಡಬೇಕು. ಜಾನಪದ ಕಲೆಗಳ ಬಗ್ಗೆ ಮಕ್ಕಳಿಗೆ ತಿಳಿಸುವ ಕೆಲಸ ನಡೆಯಬೇಕು ಎಂದರು.ತಾಲ್ಲೂಕು ಜಾನಪದ ಪರಿಷತ್ ಅಧ್ಯಕ್ಷ ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ತಾಪಂ ಸದಸ್ಯೆ ಲಕ್ಷ್ಮಿ ರವಿಶಂಕರ್, ಬನಶಂಕರಿ ಮಹಿಳಾ ಸಾಂಸ್ಕೃತಿಕ ಮತ್ತು ಸಮಾಜ ಸೇವಾ ಸಮಿತಿ ಸಂಘದ ಅಧ್ಯಕ್ಷೆ ಶಾಂತಮ್ಮ, ಕಲಾವಿದ ದೊಡ್ಡಳ್ಳಿ ರಮೇಶ್, ಜೆ.ಜಿ.ರಂಗಸ್ವಾಮಿ, ನರಸಿಂಹಶೆಟ್ಟಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.